ಬಂಟ್ವಾಳ: ವಾಮದಪದವು ಪದವಿ ಕಾಲೇಜಿನ ಮೈದಾನದಲ್ಲಿ ಡಿ.17ರಂದು ರಾಷ್ಟ್ರದ ವಿವಿಧ ಭಾಗಗಳ ಆಯ್ದ 12 ಆಹ್ವಾನಿತ ತಂಡಗಳ ಪ್ರೊ.ಕಬಡ್ಡಿ ಆಟಗಾರರ ಭಾಗವಹಿಸುವಿಕೆಯೊಂದಿಗೆ ಎ ಗ್ರೇಡ್ ಕಬಡ್ಡಿ ಪಂದ್ಯಾಟ ನಡೆಯಲಿದೆ.
ರಾಜ್ಯ ಮತ್ತು ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಕಾರದೊಂದಿಗೆ ನಡೆಯುವ ಪಂದ್ಯಾಟದಲ್ಲಿ ಹತ್ತು ಸಾಧಕರನ್ನು ಗೌರವಿಸಲಾಗುವುದು ಎಂದು ಸಂಘಟಕ ನಿತಿನ್ ಶೆಟ್ಟಿ ಮೂರ್ಜೆ ಹೇಳಿದರು.
ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮ ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಮಾರೋಪದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷತೆ ವಹಿಸಲಿದ್ದು, ಪ್ರಮುಖರು ಭಾಗವಹಿಸಲಿದ್ದಾರೆ. ಹರಿಪ್ರಸಾದ್ ಶೆಟ್ಟಿ, ರವಿ ಕಕ್ಯಪದವು, ಸುನಿಲ್ ಸಿಕ್ವೇರ, ಸುದೀಪ್ ಶೆಟ್ಟಿ ಕಂಚಾರು, ಆಸೀದ್ ಪದಂಗಡಿ ಮತ್ತು ಸಹನಾ ಎಂ. ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಸಂಚಾಲಕ ಹರಿಪ್ರಸಾದ್ ಶೆಟ್ಟಿ, ಪ್ರಮುಖರಾದ ಸುಧಾಕರ ಶೆಟ್ಟಿ ಮಠ ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಯೂತ್ ಫ್ರೆಂಡ್ಸ್ ವಾಮದಪದವು ಆಶ್ರಯದಲ್ಲಿ ಡಿ.17ರಂದು ಎ ಗ್ರೇಡ್ ಕಬಡ್ಡಿ ಪಂದ್ಯಾಟ"
Be the first to comment on "ಯೂತ್ ಫ್ರೆಂಡ್ಸ್ ವಾಮದಪದವು ಆಶ್ರಯದಲ್ಲಿ ಡಿ.17ರಂದು ಎ ಗ್ರೇಡ್ ಕಬಡ್ಡಿ ಪಂದ್ಯಾಟ"