ಬಂಟ್ವಾಳ: ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಪಂಚಾಯತಿಯಲ್ಲಿ ಮಹಿಳಾ ಗ್ರಾಮಸಭೆ ನಡೆಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ಗ್ರಾಪಂ ಅಧ್ಯಕ್ಷ ದಿನೇಶ್ ಪೂಜಾರಿ ಶುಭ ಹಾರೈಸಿ, ಸಭೆಯಿಂದ ಮಹಿಳೆಯರಿಗೆ ಪ್ರಯೋಜನವಾಗಲೆಂದು ತಿಳಿಸಿದರು.
ನೋಡಲ್ ಅಧಿಕಾರಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ರೇಣುಕಾ ಕಾರ್ಯಕ್ರಮ ನಡೆಸಿಕೊಟ್ಟರು. ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಸಮುದಾಯ ಸಂಘಟಕರಾದ ಚಂದ್ರಶೇಖರ್ ಹಾಗೂ ರವೀಶ್ ಜಲಜೀವನ್ ಮಿಷನ್ ಬಗ್ಗೆ ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರದ ವಿದ್ಯಾ ಇಲಾಖೆಯಲ್ಲಿರುವ ವಿವಿಧ ಯೋಜನೆಗಳ, ಹಾಗೂ ಇಲಾಖೆಯ ಸಾಂತ್ವನ ಕೇಂದ್ರದ ಬಗ್ಗೆ ಮಾಹಿತಿ ನೀಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿಶಾಂತ್ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಬಗ್ಗೆ ಮಾಹಿತಿ ಹಂಚಿಕೊಂಡರು.
ಗ್ರಾಮ ಸಭೆಯಲ್ಲಿ ಪಂಚಾಯತ್ ಉಪಾಧ್ಯಕ್ಷೆ ಶೀಲಾ ನಿರ್ಮಲ ವೇಗಸ್, ಸದಸ್ಯರಾದ ಜನಾರ್ಧನ ಪೂಜಾರಿ, ರಘು ಪೂಜಾರಿ, ಅಬ್ದುಲ್ ರೆಹಮಾನ್,ಜಯಂತಿ ಜನಾರ್ಧನ್, ಮೀನಾಕ್ಷಿ ಸುನಿಲ್, ಗೀತಾ ಜಯಶೀಲ ಗಾಂಭೀರ, ವೀರಕಂಬ ಗ್ರಾಮ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಸಂಜೀವಿನಿ ಒಕ್ಕೂಟದ ಸದಸ್ಯರು, ಮಹಿಳಾ ಗ್ರಾಮಸ್ಥರು ಉಪಸ್ಥಿತರಿದ್ದರು ಏನ್.ಅರ್. ಎಲ್. ಎಂ. ಸದಸ್ಯರು ತಯಾರಿಸಿದ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಈ ಸಂದರ್ಭದಲ್ಲಿ ಏರ್ಪಡಿಸಿದ್ದರು.
Be the first to comment on "ವೀರಕಂಭ ಗ್ರಾಪಂನಲ್ಲಿ ಮಹಿಳಾ ಗ್ರಾಮಸಭೆ"