ನಂದಾವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ಸಜ್ಜನರ ಪ್ರಯತ್ನಕ್ಕೆ ದೇವರ ಆಶೀರ್ವಾದವಿದ್ದರೆ ಬ್ರಹ್ಮಕಲಶೋತ್ಸವದಂಥ ಕಾರ್ಯಕ್ರಮಗಳು ಯಶಸ್ಸು ಕಾಣುವುದರಲ್ಲಿ ಸಂಶಯವಿಲ್ಲ ಎಂದು ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ನುಡಿದರು.

ಜಾಹೀರಾತು

ಬಂಟ್ವಾಳ ತಾಲೂಕಿನ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಸನ್ನಿಧಿಯಲ್ಲಿ ಶ್ರೀ ಕ್ಷೇತ್ರದ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಜನವರಿ 29ರಿಂದ ಫೆ.3ರವರೆಗೆ ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ನೆರವೇರಿಸಿ ಅವರು ಮಾತನಾಡಿದರು.

ಮುರಿದು ಹೋಗುವ ಮನಸ್ಸುಗಳು ಬ್ರಹ್ಮಕಲಶೋತ್ಸವದಂಥ ಕಾರ್ಯಕ್ರಮಗಳಲ್ಲಿ ಒಟ್ಟಾಗುತ್ತವೆ ಎಂದು ಹೇಳಿದ ಶ್ರೀಗಳು, ಆರ್ಥಿಕ ಮತ್ತು ಪಾರಮಾರ್ಥಿಕ ದೃಷ್ಟಿಯಿಂದ ದೇವಸ್ಥಾನಗಳ ಅಭಿವೃದ್ಧಿ ಮಹತ್ವದ್ದು, ಯುವಶಕ್ತಿಯೊಂದಿಗೆ ಮುನ್ನಡೆದರೆ ಯಶಸ್ಸು ಸಾಧ್ಯ ಎಂದು ಶುಭ ಹಾರೈಸಿದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಶುಭ ಹಾರೈಸಿ, ಶಾಸಕನ ನೆಲೆಯಲ್ಲಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ತನ್ನಿಂದ ಆಗುವ ಸರ್ವ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.

ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ನಂದಾವರ ಕ್ಷೇತ್ರಕ್ಕೆ ಹೊರರಾಜ್ಯಗಳಲ್ಲಷ್ಟೇ ಅಲ್ಲ, ವಿದೇಶಗಳಲ್ಲೂ ಭಕ್ತರಿದ್ದು, ಯಶಸ್ಸಿಯಾಗಿ ಬ್ರಹ್ಮಕಲಶೋತ್ಸವ ನಡೆಯಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭ ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಬಾಳಿಕೆ, ಉದ್ಯಮಿ ಧೀರೇಶ್ ರಾವ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ ದಲಂದಿಲ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಶಿರಾಜ ರಾವ್ ನೂಯಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅರವಿಂದ ಭಟ್ ಪದ್ಯಾಣ, ಬ್ರಹ್ಮಕಲಶ ಸಮಿತಿ ಕಾರ್ಯಾಧ್ಯಕ್ಷ ವಿಶ್ವನಾಥ ಆಳ್ವ ಕಾಂತಾಡಿಗುತ್ತು, ಕಾರ್ಯನಿರ್ವಹಣಾಧಿಕಾರಿ ಜಯಮ್ಮ ಪಿ, ಕ್ಷೇತ್ರದ ಪ್ರಧಾನ ಅರ್ಚಕ ವೇದಮೂರ್ತಿ ಮಹೇಶ ಭಟ್, ಸಜಿಪಮಾಗಣೆ ತಂತ್ರಿ ಸುಬ್ರಹ್ಮಣ್ಯ ಭಟ್ ಎಂ, ಸಜಿಪಮುನ್ನೂರು ತಂತ್ರಿ ಸೂರ್ಯನಾರಾಯಣ ಭಟ್ ಉಪಸ್ಥಿತರಿದ್ದರು.

ಅಭಿವೃದ್ಧಿ ಸಮಿತಿ ಸದಸ್ಯ ದಾಮೋದರ ಬಿ.ಎಂ. ಸ್ವಾಗತಿಸಿದರು.  ವ್ಯವಸ್ಥಾಪನಾ ಸಮಿತಿ ಸದಸ್ಯ ಅರುಣ್ ಕುಮಾರ್ ವಂದಿಸಿದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ನಂದಾವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*