ಡಿ.17ರಂದು ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ

ಬಂಟ್ವಾಳ ತಾಲೂಕು ಎಲಿಯನಡುಗೋಡು ಮತ್ತು ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮದ ಗಡಿ ಭಾಗದಲ್ಲಿರುವ ಹೊಕ್ಕಾಡಿಗೋಳಿ ಮಹಿಷಮರ್ದಿನಿ ಕಂಬಳ ಸಮಿತಿ ವತಿಯಿಂದ ಇತಿಹಾಸ ಪ್ರಸಿದ್ಧ ವೀರ-ವಿಕ್ರಮ  ಜೋಡುಕರೆ ಬಯಲು ಕಂಬಳವು ಹೊಕ್ಕಾಡಿಗೋಳಿಯಲ್ಲಿ ಡಿ.17ರಂದು ನಡೆಯಲಿದೆ.

ಜಾಹೀರಾತು

FILE PHOTO

ಅಂದು ಬೆಳಗ್ಗೆ ಶ್ರೀ ಕ್ಷೇತ್ರ ಪೂಂಜದ ಆಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಅವರು ಕಂಬಳ ಉದ್ಘಾಟಿಸಲಿರುವರು. ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು.

ಮಧ್ಯಾಹ್ನ 11 ಗಂಟೆಗೆ ಪ್ರವಾಸೋದ್ಯಮ ಮತ್ತು ಪರಿಸರ ಸಚಿವ ಆನಂದ ಸಿಂಗ್ ಭಾಗವಹಿಸಲಿರುವರು. ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅಧ್ಯಕ್ಷತೆ ವಹಿಸಲಿದ್ದು, ಬೆಳ್ತಂಗಡಿ ಶಾಸಕ ಹರೀಶ ಪೂಂಜ ಸಭಾ ಕಾರ್ಯಕ್ರಮ ಉದ್ಘಾಟಿಸಲಿರುವರು. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು,  ಸಚಿವ ಸುನಿಲ್ ಕುಮಾರ್, ಸಂಸದ ತೇಜಸ್ವಿ ಸೂರ್ಯ ಮತ್ತಿತರ ಗಣ್ಯರು ಭಾಗವಹಿಸುವರು.
ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಕುಕ್ಕಿಪಾಡಿ ಗ್ರಾ.ಪಂ.ಅಧ್ಯಕ್ಷೆ ಸುಜಾತಾ ಪೂಜಾರಿ ಅಧ್ಯಕ್ಷತೆ ವಹಿಸಲಿರುವರು. ಆರಂಬೋಡಿ ಗ್ರಾ.ಪಂ. ಅಧ್ಯಕ್ಷೆ ವಿಜಯಾ ಕುಂಜಾಡಿ ಅವರು ಬಹುಮಾನ ವಿತರಿಸಲಿರುವರು.ಈ ಸಂದರ್ಭ  ಜಗತ್ಪಾಲ್ ಶೆಟ್ಟಿ ಉಮನೊಟ್ಟು, ಅರುಣ್ ರೈ ತೋಡಾರ್, ರಾಜೀವ ಶೆಟ್ಟಿ ಎಡ್ತೂರು, ಶ್ರೀಧರ್ ಮರೋಡಿ, ಮಾಸ್ಟರ್ ಅಮೋಘವರ್ಷ ಅವರನ್ನು ಸನ್ಮಾನಿಸಲಾಗುವುದು ಎಂದು ಕಂಬಳ ಸಮಿತಿ ಅಧ್ಯಕ್ಷ ನೋಣಾಲ್‌ಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಡಿ.17ರಂದು ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*