ಬಂಟ್ವಾಳ: ಖಾಸಗಿ ಬಸ್ಸುಗಳೆರಡು ಬಿ.ಸಿ.ರೋಡಿನಿಂದ ಮೆಲ್ಕಾರ್ ಕಡೆ ತೆರಳುವ ಮಾರ್ಗದಲ್ಲಿ ಬಿ.ಸಿ.ರೋಡಿನ ನೇತ್ರಾವತಿ ಸೇತುವೆ ಬಳಿ ಮುಖಾಮುಖಿ ಡಿಕ್ಕಿಯಾದ ಘಟನೆ ಶನಿವಾರ ಬೆಳಗ್ಗೆ ನಡೆದಿದ್ದು, ಘಟನೆಯಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಎಂಟು ಮಂದಿ ಗಾಯಗೊಂಡಿದ್ದಾರೆ.
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ಅಡ್ಡಹೊಳೆ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಈ ಜಾಗದಲ್ಲಿ ಎರಡೂ ಬಸ್ಸುಗಳು ಗಮ್ಯಸ್ಥಾನ ತಲುಪುವ ತರಾತುರಿಯಲ್ಲಿ ಸಂಚರಿಸುತ್ತಿದ್ದ ವೇಳೆ ಡಿಕ್ಕಿಯಾಗಿದೆ. ಇದೇ ಸಂದರ್ಭ ಬಸ್ಸಿಗೆ ಕಾರು ಡಿಕ್ಕಿಯಾದ ಘಟನೆಯೂ ನಡೆಯಿತು. ಕೆಲಕಾಲ ಹೆದ್ದಾರಿಯಲ್ಲಿ ಸಂಚಾರಕ್ಕೂ ಇದರಿಂದ ತೊಂದರೆ ಉಂಟಾಗಿದ್ದು, ಬಳಿಕ ಗಜಲಕ್ಷ್ಮೀ ಕ್ರೇನ್ ಮೂಲಕ ಬಸ್ಸುಗಳನ್ನು ಕೊಂಡೊಯ್ಯಲಾಯಿತು.
| ಪುರಸಭಾ ವ್ಯಾಪ್ತಿಯ ಜನರಲ್ಲಿ ಸಹಕಾರಕ್ಕೆ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್ ಮನವಿ | ನೀರು ಶುದ್ಧೀಕರಣ ಘಟಕಕ್ಕೆ ಭೇಟಿ,…