ಬೊಂಡಾಲ ಹೈಸ್ಕೂಲಿನ ವಾರ್ಷಿಕೋತ್ಸವಕ್ಕೆ ಚಾಲನೆ, ಅಮೃತ್ ಶಾಲಾ ಯೋಜನೆಯಡಿ ನೂತನ ಶೌಚಾಲಯ ಉದ್ಘಾಟನೆ

ಬಂಟ್ವಾಳ: ಶಂಭೂರಿನ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ವಾರ್ಷಿಕೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಪ್ರತಿಭಾ ಪುರಸ್ಕಾರ ಮತ್ತು ಅಮೃತ್ ಶಾಲಾ ಯೋಜನೆಯಲ್ಲಿ ನಿರ್ಮಾಣಗೊಂಡ ಹೆಣ್ಣುಮಕ್ಕಳ ಶೌಚಾಲಯ ಉದ್ಘಾಟನಾ ಕಾರ್ಯಕ್ರಮ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷತೆಯಲ್ಲಿ ನಡೆಯಿತು.

ಜಾಹೀರಾತು

ಈ ಸಂದರ್ಭ ಉದ್ಘಾಟನೆ ನೆರವೇರಿಸಿ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ,  ವಿದ್ಯಾರ್ಥಿಗಳು ಇಂದು ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕ ಸವಾಲುಗಳಿಗೆ ತಯಾರಾಗಬೇಕಿದ್ದು, ಇಂಥ ಹೊತ್ತಿನಲ್ಲಿ ಶಾಲೆಗಳಿಗೆ ಮೂಲಸೌಕರ್ಯ ಹಾಗೂ ಕಲಿಕೆಗೆ ಪೂರಕವಾದ ಕೆಲಸಗಳನ್ನು ಸರಕಾರ ಮಾಡುತ್ತಿದೆ. ಶಾಸಕನಾಗಿ ಶಾಲಾಭಿವೃದ್ಧಿಗೆ ಸಕಲ ನೆರವುಗಳನ್ನು ನೀಡುವುದಾಗಿ ತಿಳಿಸಿದರು.

ವೇದಿಕೆಯಲ್ಲಿ ನಿಟ್ಟೆ ವಿವಿ ಉಪಕುಲಪತಿ ವಿಶಾಲ್ ಹೆಗ್ಡೆ, ನರಿಕೊಂಬು ಶ್ರೀ ನಾಲ್ಕೈತ್ತಾಯ ಪಂಜುರ್ಲಿ ನೇಮೋತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ಬಂಗೇರ ನಿರ್ಮಲ್, ಪಾಣೆಮಂಗಳೂರು ಶಾರದಾ ಪ್ರೌಢಶಾಲೆ ಸಂಚಾಲಕ ಡಾ. ವಿಶ್ವನಾಥ ನಾಯಕ್, ಪತ್ರಕರ್ತ ಹರೀಶ ಮಾಂಬಾಡಿ, ಉದ್ಯಮಿ ಪದ್ಮನಾಭ ಮಯ್ಯ, ಲಯನ್ಸ್ ಕ್ಲಬ್ ಪ್ರಮುಖರಾದ ಸಂಜೀವ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯರಾದ ಹೇಮಲತಾ, ಸವಿತಾ ಮತ್ತು ಸಂತೋಷ್, ಶ್ರೀ ದುರ್ಗಾಪರಮೇಶ್ವರಿ ಮಹಿಳಾ ಮಂಡಳಿ ಅಧ್ಯಕ್ಷೆ ಸೀತಾ, ಮುಖ್ಯೋಪಾಧ್ಯಾಯ ಕಮಲಾಕ್ಷ ಕಲ್ಲಡ್ಕ, ಶಾಲಾ ವಿದ್ಯಾರ್ಥಿ ನಾಯಕಿ ತನಿಶಾ ಉಪಸ್ಥಿತರಿದ್ದರು. ಈ ಸಂದರ್ಭ ಹಿರಿಯ ಯಕ್ಷಗಾನ ಅರ್ಥಧಾರಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಎಂ.ಪ್ರಭಾಕರ ಜೋಷಿ, ಲಯನ್ ಪ್ರಾಂತೀಯ ಸಲಹೆಗಾರ ರಾಧಾಕೃಷ್ಣ ರೈ ಅವರನ್ನು ಸನ್ಮಾನಿಸಲಾಯಿತು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರಿಂದ ನೂತನ ಶೌಚಾಲಯ ಉದ್ಘಾಟನೆ ನಡೆಯಿತು. ಈ ಸಂದರ್ಭ ಸಚ್ಚಿದಾನಂದ ಶೆಟ್ಟಿ ಬೊಂಡಾಲ, ಜಗನ್ನಾಥ ಬಂಗೇರ ನಿರ್ಮಲ್, ಆನಂದ ಶಂಭೂರು, ಯಶೋಧರ ಕರ್ಬೆಟ್ಟು, ಕಮಲಾಕ್ಷ ಕಲ್ಲಡ್ಕ ಮೊದಲಾದವರು ಉಪಸ್ಥಿತರಿದ್ದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾರ್ಯಾಧ್ಯಕ್ಷರೂ ಆಗಿರುವ ಬೊಂಡಾಲ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಶಿಕ್ಷಕ ಹರಿಪ್ರಸಾದ್ ಕುಲಾಲ್ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ ಪ್ರಕಾಶ್ ವಂದಿಸಿದರು. ಶಿಕ್ಷಕ ವೃಂದದವರು ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬೊಂಡಾಲ ಹೈಸ್ಕೂಲಿನ ವಾರ್ಷಿಕೋತ್ಸವಕ್ಕೆ ಚಾಲನೆ, ಅಮೃತ್ ಶಾಲಾ ಯೋಜನೆಯಡಿ ನೂತನ ಶೌಚಾಲಯ ಉದ್ಘಾಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*