ಬಂಟ್ವಾಳ: ಕಳ್ಳಿಗೆ ಗ್ರಾಮ ದೇವಂದಬೆಟ್ಟು ಎಂಬಲ್ಲಿ ಮನೆಯೊಂದರಲ್ಲಿ ಅಗ್ನಿ ಆಕಸ್ಮಿಕ ಶುಕ್ರವಾರ ತಡರಾತ್ರಿ ಸಂಭವಿಸಿದ್ದು, ಕೂಡಲೇ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದೆ. ಸುಂದರಿ, ಶುಭ ಭಂಜನ್ ಎಂಬವರಿಗೆ ಸೇರಿದ ಮನೆಯ ಮೊದಲ ಅಂತಸ್ತಿನ ಮನೆಯಲ್ಲಿ ಬೆಂಕಿ ತಗಲಿತ್ತು ಎಂದು ಮಾಹಿತಿ ನೀಡಿರುವ ಅಗ್ನಿಶಾಮಕದಳದ ಅಧಿಕಾರಿಗಳು ಕೂಡಲೇ ಧಾವಿಸಿ ಹೆಚ್ಚಿನ ಅಗ್ನಿ ಅನಾಹುತವನ್ನು ತಪ್ಪಿಸಿದ್ದಾರೆ. ಸಿಬ್ಬಂದಿಯಾದ ಪುರುಷೋತ್ತಮ ,ರೋಹಿತ್, ಪ್ರಸಾದ್, ಗೃಹರಕ್ಷಕ ಸಿಬ್ಬಂದಿ ಜಯಗಣೇಶ್, ಚಾಲಕ ಕಿರಣ್ ಕುಮಾರ್ ಭಾಗವಹಿಸಿದ್ದರು.
| ಪುರಸಭಾ ವ್ಯಾಪ್ತಿಯ ಜನರಲ್ಲಿ ಸಹಕಾರಕ್ಕೆ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್ ಮನವಿ | ನೀರು ಶುದ್ಧೀಕರಣ ಘಟಕಕ್ಕೆ ಭೇಟಿ,…