ಕಲ್ಲಡ್ಕ

ಕಲ್ಲಡ್ಕದಲ್ಲಿ ಉದ್ಯೋಗ ಮೇಳ: 60 ಮಂದಿಗೆ ಸ್ಥಳದಲ್ಲೇ ನೇಮಕಾತಿ, 410ಕ್ಕೂ ಅಧಿಕ ಮಂದಿ ಎರಡನೇ ಸುತ್ತಿನ ಸಂದರ್ಶನಕ್ಕೆ ಆಯ್ಕೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಶನಿವಾರ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮಂಗಳೂರು ಹಾಗೂ ಶ್ರೀರಾಮ ಪದವಿ ಕಾಲೇಜು ಕಲ್ಲಡ್ಕ ಆಶ್ರಯದಲ್ಲಿ ಬೃಹತ್‌ ಉದ್ಯೋಗ ಮೇಳವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಘಾಟಿಸಿದರು.

ಜಾಹೀರಾತು

ಈ ಸಂದರ್ಭ ಮಾತನಾಡಿದ ಅವರು, ಮಕ್ಕಳಿಗೆ ಕೌಶಲ್ಯಭರಿತ ಶಿಕ್ಷಣ ದೊರಕಬೇಕು ಎಂಬ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದಿದ್ದು, ಮುಂದೊಂದು ದಿನ ಇದು ದೊಡ್ಡ ಮಟ್ಟದ ಬದಲಾವಣೆಗೆ ಕಾರಣವಾಗಲಿದೆ ಎಂದರು.

ಮೇಳದಲ್ಲಿ 1180 ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದು, 53 ಕಂಪನಿಗಳು ಇವರ ಸಂದರ್ಶನ ಪಡೆದರು. ಸುಮಾರು 60ಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಆದೇಶ ಪತ್ರ ದೊರೆಯಿತು. 410ಕ್ಕೂ ಅಧಿಕ ಮಂದಿಗೆ ಎರಡನೇ ಸುತ್ತಿನ ಸಂದರ್ಶನಕ್ಕೆ ಆಹ್ವಾನ ನೀಡಲಾಯಿತು.

ಜಾಹೀರಾತು

ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಲಯನ್ಸ್ ಪೂರ್ವ ರಾಜ್ಯಪಾಲ, ಡಾ. ಗೀತ್‌ಪ್ರಕಾಶ್, ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಸಂಚಾಲಕ ವಸಂತ ಮಾಧವ,ಬಾಳ್ತಿಲ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಹಿರಣ್ಮಯಿ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿ ಯಚ್ಚರಪ್ಪ ಬಡಿಗೇರ, ಲಯನ್ಸ್ ಪ್ರಾಂತ್ಯ ಅಧ್ಯಕ್ಷ ಲಕ್ಷಣ ಕುಲಾಲ್ ಅಗ್ರಬೈಲು ಉಪಸ್ಥಿತರಿದ್ದರು.

ಕಾಲೇಜಿನ ಪ್ರಿನ್ಸಿಪಾಲ್ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ಸ್ವಾಗತಿಸಿದರು. ಉಪನ್ಯಾಸಕ ಹರ್ಷಿತ್ ವಂದಿಸಿದರು. ವಿದ್ಯಾರ್ಥಿ ಜೈದೀಪ್ ಅಮೈ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ