ಬಂಟ್ವಾಳ

ಮೂಡುಬಿದಿರೆಯಲ್ಲಿ ನಡೆಯುವ ಅಂತಾರಾಷ್ಟ್ರೀಯ ಜಾಂಬೂರಿಗೆ ಬಂಟ್ವಾಳದಿಂದ ಹೊರೆಕಾಣಿಕೆ ಮೆರವಣಿಗೆ

ಮೂಡುಬಿದಿರೆಯಲ್ಲಿ ಆಳ್ವಾಸ್ ಡಾ. ಎಂ.ಮೋಹನ ಆಳ್ವ ನೇತೃತ್ವದಲ್ಲಿ ಮೂಡುಬಿದಿರೆಯಲ್ಲಿ ಡಿ.21ರಿಂದ 27ರವರೆಗೆ ನಡೆಯಲಿರುವ ಸ್ಕೌಟ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಬಂಟ್ವಾಳ ತಾಲೂಕಿನಿಂದ ಹೊರೆಕಾಣಿಕೆಯ ಬೃಹತ್ ಮೆರವಣಿಗೆಗೆ ಒಡಿಯೂರು ಕ್ಷೇತ್ರದ ಸಾಧ್ವಿ ಶ್ರೀಮಾತಾನಂದಮಯೀ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು, ಡಾ. ಮೋಹನ ಆಳ್ವ ಅವರ ಕ್ರಿಯಾಶೀಲತೆಯಿಂದಾಗಿ ಆಳ್ವಾಸ್ ನಲ್ಲಿ ಇಂಥದ್ದೊಂದು ದೊಡ್ಡ ಮಟ್ಟದ ಕಾರ್ಯಕ್ರಮ ನಡೆಯಲು ಸಾಧ್ಯವಾಗಿದ್ದು, ಎಲ್ಲರ ಸಹಕಾರ ದೊರಕಿರುವ ಹಿನ್ನೆಲೆಯಲ್ಲಿ ಜಾಂಬೂರಿ ಯಶಸ್ವಿಯಾಗಿ ನಡೆಯಲಿದೆ ಎಂದು ಶುಭ ಹಾರೈಸಿದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ಈಗಾಗಲೇ ಕಾರ್ಯಕ್ರಮಕ್ಕೆ ರಾಜ್ಯ ಸರಕಾರ ಹತ್ತು ಕೋಟಿ ರೂಗಳನ್ನು ಒದಗಿಸಿದ್ದು, ಯಶಸ್ವಿಯಾಗಿ ನೆರವೇರಿಸಲು ಸರ್ವ ಸಹಕಾರ ನೀಡಿದೆ ಎಂದರು.

ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಭಾರತಕ್ಕೆ ಅಂತಾರಾಷ್ಟ್ರೀಯ ಜಾಂಬೂರಿ ಆಯೋಜನೆಯಾಗಿದ್ದು, ಅದರಲ್ಲೂ ಮೂಡುಬಿದಿರೆಯಲ್ಲಿ ನಡೆಯುತ್ತಿರುವುದು ವಿಶೇಷ ಎಂದರು.

ಈ ಸಂದರ್ಭ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮಾಜಿ ಶಾಸಕರಾದ ಕೆ.ಪದ್ಮನಾಭ ಕೊಟ್ಟಾರಿ, ಎ.ರುಕ್ಮಯ ಪೂಜಾರಿ, ಜನಜಾಗೃತಿ ವೇದಿಕೆ ಅಧ್ಯಕ್ಷ ರೊನಾಲ್ಡ್ ಡಿಸೋಜ,  ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ತಾಲೂಕು ಸಮಿತಿ ಕಾರ್ಯಾಧ್ಯಕ್ಷ ಪ್ರಹ್ಲಾದ್ ಶೆಟ್ಟಿ ಜಡ್ತಿಲ, ಆರ್ಥಿಕ ಸಮಿತಿ ಸಂಚಾಲಕ ಜಗನ್ನಾಥ ಚೌಟ ಬದಿಗುಡ್ಡೆ, ಹೊರೆಕಾಣಿಕೆ ಸಮಿತಿ ಸಂಚಾಲಕ ಚಂದ್ರಹಾಸ ಶೆಟ್ಟಿ ರಂಗೋಲಿ, ಪ್ರಧಾನ ಕಾರ್ಯದರ್ಶಿ ಬಿ.ಮಹಮ್ಮದ್ ತುಂಬೆ, ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಜಯಾನಂದ, ಫರಂಗಿಪೇಟೆ ಸೇವಾಂಜಲಿ ಟ್ರಸ್ಟಿ ಕೃಷ್ಣಕುಮಾರ್ ಪೂಂಜ, ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ ಸಹಿತ ವಿವಿಧ ಸಂಘ, ಸಂಸ್ಥೆಗಳು, ರಾಜಕೀಯ ಪಕ್ಷಗಳ ಪ್ರಮುಖರು ಉಪಸ್ಥಿತರಿದ್ದರು. ಕಿಶೋರ್ ಭಂಡಾರಿ ಕಾರ್ಯಕ್ರಮ ನಿರ್ವಹಿಸಿದರು.

Harish Mambady

ಕಳೆದ 26 ವರ್ಷಗಳಿಂದ ಪತ್ರಕರ್ತನಾಗಿ ಹಲವು ದೈನಿಕಗಳಲ್ಲಿ ಮಂಗಳೂರು, ಮಣಿಪಾಲ ಮತ್ತು ಬಂಟ್ವಾಳಗಳಲ್ಲಿ ಕೆಲಸ ಮಾಡಿರುವ ಅನುಭವ ಇರುವ ಹರೀಶ ಮಾಂಬಾಡಿ, 2016ರಲ್ಲಿ www.bantwalnews.com ಆರಂಭಿಸಿದ್ದು, ಇದರ ಸಂಪಾದಕರೂ ಆಗಿದ್ದಾರೆ.

Recent Posts