ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಶಂಭೂರು ಹೈಸ್ಕೂಲ್ ನಲ್ಲಿ ವಾರ್ಷಿಕೋತ್ಸವ

ಜಾಹೀರಾತು

ಗ್ರಾಮೀಣ ಪ್ರದೇಶದಲ್ಲಿ ಸರ್ವ ರೀತಿಯ ಸೌಲಭ್ಯ ಹೊಂದಿರುವ, ಗುಣಮಟ್ಟದ ಶಿಕ್ಷಣ ನೀಡುವ ಇಂತಹ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಮುನ್ನಡೆಸುತ್ತಿರುವುದು ಶ್ಲಾಘನೀಯ. ಊರವರೆಲ್ಲರ ಸಹಕಾರದಿಂದ ಶಾಲೆ ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಹೇಳಿದರು.

ಅವರು ಶಂಭೂರಿನ‌ ಬೊಂಡಾಲ ಜಗನ್ನಾಥ ಶೆಟ್ಟಿ ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತಾನಾಡುತ್ತಿದ್ದರು.

ಜಾಹೀರಾತು

ಸಮಾರಂಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸರಪಾಡಿ ಅಶೋಕ್ ಶೆಟ್ಟಿ ಹಾಗು ನಿವೃತ್ತ ಶಿಕ್ಷಕ ನಾರಾಯಣ ಗೌಡರನ್ನು ಅಭಿನಂದಿಸಲಾಯಿತು.ಈ ಸಂದರ್ಭದಲ್ಲಿ ಶಾಲೆಯನ್ನು ದತ್ತು ಸ್ವೀಕರಿಸಿ ಅಭಿವೃದ್ಧಿಪಡಿಸಿ ಹತ್ತು ವರ್ಷಗಳನ್ನು ಪೂರೈಸಿದ ನೆನಪಿಗಾಗಿ ಬೊಂಡಾಲ ಸಚ್ಚಿದಾನಂದ ಶೆಟ್ಟಿಯವರನ್ನು ಯುವ ಸಂಗಮ ಯುವಕ ಮಂಡಲ ಹಾಗು ದುರ್ಗಾಪರಮೇಶ್ವರಿ ಮಹಿಳಾ ಮಂಡಳಿ ಆಶ್ರಯದಲ್ಲಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ರಮಾನಾಥ ರೈ, ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಚಂದ್ರ ಪ್ರಕಾಶ್ ಶೆಟ್ಟಿ, ಯುವ ಸಂಗಮದ ಕಾರ್ಯದರ್ಶಿ ಕೇಶವ ನಾಯ್ಕ್, ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ಸುಧೀರ್ ನಿರ್ಮಾಲ್ ಉಪಸ್ಥಿತರಿದ್ದರು.ಬೊಂಡಾಲ ಸಚ್ಚಿದಾನಂದ ಶೆಟ್ಟಿ ಸ್ವಾಗತಿಸಿ, ಮುಖ್ಯಶಿಕ್ಷಕ ಕಮಲಾಕ್ಷ ಕಲ್ಲಡ್ಕ ವಂದಿಸಿದರು. ಶಿಕ್ಷಕ ಹರಿಪ್ರಸಾದ್ ಕುಲಾಲ್ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಶಂಭೂರು ಹೈಸ್ಕೂಲ್ ನಲ್ಲಿ ವಾರ್ಷಿಕೋತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*