ವಾಮದಪದವು

ಕರಾವಳಿಯ ಅಡಕೆ ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ: ಸಿದ್ಧಕಟ್ಟೆಯಲ್ಲಿ ಸಹಕಾರಿ ವ್ಯವಸಾಯಿಕ ಸಂಘದ ಸೇವಾ ಕೇಂದ್ರ ಉದ್ಘಾಟಿಸಿ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಅಮೃತ ಮಹೋತ್ಸವ ಪ್ರಯುಕ್ತ ನೂತನವಾಗಿ ನಿರ್ಮಾಣಗೊಂಡ ವೀರ ಸಾವರ್ಕರ್ ವಾಣಿಜ್ಯ ಸಂಕೀರ್ಣ, ನೇತಾಜಿ ಬಹು ಉಪಯೋಗಿ ಸೇವಾ ಕೇಂದ್ರ, ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣ, ನವೀಕೃತ ಕಚೇರಿಯ ಲೋಕಾರ್ಪಣೆ ಕಾರ್ಯಕ್ರಮ ಶನಿವಾರ ನಡೆಯಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಬಹುಪಯೋಗಿ ಸೇವಾ ಕೇಂದ್ರವನ್ನು ಉದ್ಘಾಟಸಿ ಮಾತನಾಡಿ ಪ್ರಧಾನಿ ಮೋದಿ ಅವರು ರೈತ ಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ ಎಂದರು. ಅವರು ಅಡಿಕೆ ಬೆಳೆಯ ಬಗ್ಗೆ ಗೃಹಸಚಿವರು ಸ್ಪಷ್ಟ ಸಲಹೆ ನೀಡಿದ್ದು, ಕರಾವಳಿಯ ಅಡಿಕೆ ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ ಎಂದರು.

ಜಾಹೀರಾತು

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಅಮೃತ ಮಹೋತ್ಸವ ಹಾಗೂ ವೀರ ಸಾವರ್ಕರ್ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿ, ದೇಶಭಕ್ತ ಮಹಾಪುರುಷರಾದ ವೀರ ಸಾವರ್ಕರ್ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸ್ಮರಣೆ ಮಾಡಿದ ಸಂಘದ ಕಾರ್ಯ ಪ್ರಶಂಸನೀಯ ಎಂದು ಹೇಳಿದರು.

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಟಿ.ಜಿ.ರಾಜಾರಾಮ್ ಭಟ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸಿದ್ದಕಟ್ಟೆ ಸಹಕಾರಿ ಸಂಘ ಸರಕಾರದ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಂಡು ಜಿಲ್ಲೆಯಲ್ಲಿ ಮೇಲ್ಪಂಕ್ತಿಯಲ್ಲಿದೆ ಎಂದು ಹೇಳಿದರು.

ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಅವರು ಮಾತನಾಡಿ,ರೈತರ ಅಭಿವೃದ್ಧಿಯಿಂದ ದೇಶ ಬಲಿಷ್ಠವಾಗುತ್ತದೆ ಎಂದರು. ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರು ಪ್ರಾಸ್ತಾವಿಕವಾಗಿ ಮಾತನಾಡಿ,ಪ್ರಸ್ತುತ ವರ್ಷ ಈಗಾಗಲೇ ೭೫ ಕೋಟಿ ರೂ.ಗಳಿಗೂ ಅಧಿಕ ಸಾಲ ನೀಡಲಾಗಿದ್ದು ಆರ್ಥಿಕ ವರ್ಷ ಅಂತ್ಯಕ್ಕೆ 100 ಕೋ.ರೂ. ಸಾಲ ನೀಡಲು ಗುರಿ ಹೊಂದಲಾಗಿದೆ ಎಂದರು.

ದ.ಕ.ಜಿ.ಹಾ.ಉ.ಒಕ್ಕೂಟ ಅಧ್ಯಕ್ಷ ಸುಚರಿತ ಶೆಟ್ಟಿ,ಬಂಟ್ವಾಳ ತಾಲೂಕು ಸಹಕಾರಿ ಕೃಷಿ ಉತ್ಪನ್ನ ಮಾರಾಟ ಸಂಘ ಅಧ್ಯಕ್ಷ ರವೀಂದ್ರ ಕಂಬಳಿ, ಬಂಟ್ವಾಳ ನಗರ ಯೋಜನಾ ಪ್ರಾಽಕಾರ ಅಧ್ಯಕ್ಷ  ಬಿ.ದೇವದಾಸ್ ಶೆಟ್ಟಿ, ಬಂಟ್ವಾಳ ಭೂ ಬ್ಯಾಂಕ್ ಅಧ್ಯಕ್ಷ ಅರುಣ್ ರೋಶನ್ ಡಿಸೋಜಾ , ಜಿ.ಪಂ.ಮಾಜಿ ಸದಸ್ಯ ಎಂ. ತುಂಗಪ್ಪ ಬಂಗೇರ,ಪ್ರಮುಖರಾದ ವಸಂತ ಕುಮಾರ್ ಅಣ್ಣಳಿಕೆ, ರಮಾನಾಥ ರಾಯಿ, ಲಕ್ಷ್ಮೀಧರ ಶೆಟ್ಟಿ, ಸುಜಾತಾ ಆರ್.ಪೂಜಾರಿ, ರಶ್ಮಿತ್ ಶೆಟ್ಟಿ ಕೈತ್ರೋಡಿ, ಯೋಗೀಶ್ ಆಚಾರ್ಯ,ಸುನಿತಾ ಪಿ.ಶೆಟ್ಟಿ, ಎಚ್.ಪ್ರಭಾಕರ ಹುಲಿಮೇರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಎ.ಗೋಪಿನಾಥ ರೈ, ಪ್ರಭಾಕರ ಐಗಳ್,  ಎಸ್.ಅರ್ಕಕೀರ್ತಿ ಇಂದ್ರ, ಯು.ಗೋಪಾಲ ಬಂಗೇರ, ಚಂದ್ರನಾಥ ಇಂದ್ರ, ಶೀನ ಶೆಟ್ಟಿ , ನಾಗರಾಜ ಬಂಗ, ಜನಾರ್ದನ ಶೆಟ್ಟಿಗಾರ್,ಜಗತ್ಪಾಲ ಶೆಟ್ಟಿ ಉಮನೊಟ್ಟು, ವಾಸು ಪೂಜಾರಿ ಕುಲಾವು, ಮನೀಷ್ ಶೆಟ್ಟಿ, ಸುಭಾಶ್ ಪರಾಡ್ಕರ್,ಅನಿತಾ ಮೊರಾಸ್, ಲಿಖಿತಾ, ರಾಜೇಶ್ ಗೋವಿಂದಬೆಟ್ಟು  ಅವರನ್ನು ಸಮ್ಮಾನಿಸಲಾಯಿತು. ಸಂಘದ ಮುಖ್ಯ ಕಾರ್ಯನಿರ್ವಹಣಾಽಕಾರಿ ಆರತಿ ಶೆಟ್ಟಿ, ನಿರ್ದೇಶಕರಾದ ಪದ್ಮರಾಜ ಬಲ್ಲಾಳ್ ಮಾವಂತೂರು, ಸಂದೇಶ್ ಶೆಟ್ಟಿ ಪೊಡುಂಬ, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ಹರೀಶ್ ಆಚಾರ್ಯ ರಾಯಿ, ದಿನೇಶ್ ಪೂಜಾರಿ ಹುಲಿಮೇರು, ಉಮೇಶ್ ಗೌಡ ಮಂಚಕಲ್ಲು, ಜಾರಪ್ಪ ನಾಯ್ಕ, ವೀರಪ್ಪ ಪರವ, ದೇವರಾಜ ಸಾಲ್ಯಾನ್, ಅರುಣಾ ಎಸ್. ಶೆಟ್ಟಿ, ವೃತ್ತಿಪರ ನಿರ್ದೇಶಕ ಮಾಧವ ಶೆಟ್ಟಿಗಾರ್, ಬ್ಯಾಂಕ್ ಪ್ರತಿನಿಧಿ ಕೇಶವ ಕಿಣಿ ಉಪಸ್ಥಿತರಿದ್ದರು. ಪ್ರಭಾಕರ ಪ್ರಭು ಅವರು ಸ್ವಾಗತಿಸಿದರು.ನಿರ್ದೇಶಕಿ ಮಂದಾರತಿ ಶೆಟ್ಟಿ ವಂದಿಸಿದರು. ಪ್ರಜ್ವಲ್ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts