ವಿಟ್ಲ

ಒಣಗಲು ಹಾಕಿದ ಅಡಕೆ ಕಳವು ಪ್ರಕರಣ: ಆರೋಪಿ ಬಂಧನ, ಈತನ ಮೇಲಿವೆ ಹಲವು ಪ್ರಕರಣ

ಪಾಣೆಮಂಗಳೂರು ಗ್ರಾಮದ ಬೋಳಂಗಡಿ ಎಂಬಲ್ಲಿ ಒಣಗಲು ಹಾಕಿದ 120 ಕೆಜಿ ಅಡಕೆಯನ್ನು ಕಳವು ಮಾಡಿದ ಆರೋಪದಲ್ಲಿ ಮಂಜುನಾಥ ನಾಗರಾಜ ಬೋವಿ (50) ಎಂಬಾತನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಜಾಹೀರಾತು

ಈ ಕುರಿತು ಐವನ್ ತೊರಾಸ್ ಎಂಬವರು ಬಂಟ್ವಾಳ ಪೊಲೀಸರಿಗೆ ದೂರು ನೀಡಿದ್ದು, ತನ್ನ ಅಡಿಕೆ ತೋಟದ ಮಧ್ಯೆದಲ್ಲಿರುವ ಅಂಗಳದಲ್ಲಿ ಒಣಗಲು ಅಡಿಕೆಯನ್ನು ಹಾಕಿದ್ದು,  ಸುಮಾರು 120 ಕೆ.ಜಿ ಅಡಿಕೆಯನ್ನು ಯಾರೋ ಕಳ್ಳರು ಡಿ.24 ಮತ್ತು 29ರ ಮಧ್ಯೆ ಕಳವು ಮಾಡಿರುವುದಾಗಿ ದೂರಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕಶೆಕೋಡಿ ನಿವಾಸಿ ಮಂಜುನಾಥ ನಾಗರಾಜ್ ಭೋವಿ ಎಂಬಾತನನ್ನು ವಶಕ್ಕೆ ಪಡೆದು ಕಳವು ಮಾಡಿದ 105 ಕೆ.ಜಿ. ಅಡಿಕೆ, ಕಳವು ಕೃತ್ಯಕ್ಕೆ ಉಪಯೋಗಿಸಿದ ಸ್ಕೂಟರ್ ಹಾಗೂ ನಗದು ಹಣವನ್ನು  ವಶಪಡಿಸಲಾಗಿದೆ.  ಆರೋಪಿಯು ಮಂಗಳೂರು ನಗರದ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣೆಗಳಲ್ಲಿ ಅಲ್ಲದೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಕಾರವಾರ, ಹೊನ್ನಾವರ ಠಾಣಾ ವ್ಯಾಪ್ತಿಯಲ್ಲಿ ಕಳವು ಕೃತ್ಯಗಳಲ್ಲಿ ಭಾಗಿಯಾಗಿರುತ್ತಾನೆ.  ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ದಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.