ಬಂಟ್ವಾಳ

ಲೊರೆಟ್ಟೊದಲ್ಲಿ ಬಂಟ್ವಾಳ ಕ್ರೆಡಿಟ್ ಕೋಅಪರೇಟಿವ್ ಸೊಸೈಟಿ ನೂತನ ಶಾಖೆ ಜ.5ರಂದು ಉದ್ಘಾಟನೆ

ಜಾಹೀರಾತು

ಬಂಟ್ವಾಳ ಕ್ರೆಡಿಟ್ ಕೋಅಪರೇಟಿವ್ ಸೊಸೈಟಿಯ ನೂತನ ಲೊರೆಟ್ಟೊ ಶಾಖೆ ಜನವರಿ 5ರಂದು ಗುರುವಾರ ಬೆಳಗ್ಗೆ 10.35ಕ್ಕೆ ಸರಿಯಾಗಿ ಲೊರೆಟ್ಟೊಪದವಿನ ಗ್ರೇಸ್ ವಾಣಿಜ್ಯ ಸಂಕೀರ್ಣದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಅಧ್ಯಕ್ಷ ಬಿ.ರಮಾನಾಥ ರೈ ಮತ್ತು ಸಿಇಒ ಬೇಬಿ ಕುಂದರ್ ಹೇಳಿದ್ದಾರೆ.

ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಉದ್ಘಾಟಿಸುವರು. ನಗದು ಕೌಂಟರ್ ಅನ್ನು ಲೊರೆಟ್ಟೊ ಮಾತಾ ಚರ್ಚ್ ಧರ್ಮಗುರು ವಂದನೀಯ ಫ್ರಾನ್ಸಿಸ್ ಕ್ರಾಸ್ತ ಉದ್ಘಾಟಿಸುವರು. ಭದ್ರತಾ ಕೊಠಡಿಯನ್ನು ಮಿತ್ತಬೈಲ್ ಬಹು. ಇರ್ಷಾದ್ ದಾರಿಮಿ ಆಲ್ ಜಝರಿ ಉದ್ಘಾಟಿಸುವರು. ಗಣಕೀಕರಣವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸುವರು ಎಂದು ಅವರು ಮಾಹಿತಿ ನೀಡಿದ್ದಾರೆ. ಬಂಟ್ವಾಳ ಕ್ರೆಡಿಟ್ ಕೋಅಪರೇಟಿವ್ ಸೊಸೈಟಿಯಲ್ಲಿ ಅಧ್ಯಕ್ಷರಾಗಿ ರಮಾನಾಥ ರೈ, ಉಪಾಧ್ಯಕ್ಷರಾಗಿ ಮಾಯಿಲಪ್ಪ ಸಾಲಿಯಾನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಬೇಬಿ ಕುಂದರ್, ನಿರ್ದೇಶಕರಾಗಿ ಚಂದ್ರಪ್ರಕಾಶ ಶೆಟ್ಟಿ, ಪದ್ಮಶೇಖರ ಜೈನ್, ಎಂ.ಎಸ್.ಮಹಮ್ಮದ್, ಸುದರ್ಶನ ಜೈನ್, ಬಿ.ಎಂ.ಅಬ್ಬಾಸ್ ಆಲಿ, ವಾಣಿ ಪ್ರಕಾಶ್ ಕಾರಂತ, ಮಂಜುಳ ಕುಶಾಲಪ್ಪ ಗೌಡ, ಪಿಯೂಸ್ ಎಲ್. ರೋಡ್ರಿಗಸ್, ನಾರಾಯಣ ನಾಯ್ಕ, ಅಲ್ಫೋನ್ಸ್ ಮಿನೇಜಸ್, ಅಮ್ಮು ಅರ್ಬಿಗುಡ್ಡೆ ಕಾರ್ಯನಿರ್ವಹಿಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ