ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ಸಾಧಕರಿಗೆ ಸನ್ಮಾನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಬಂಟ್ವಾಳದ ಕುಲಾಲ ಭವನದಲ್ಲಿ ನಡೆಯಿತು.
ರಾಜ್ಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ, ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ವೆಂಕಟೇಶ್ ಬಂಟ್ವಾಳ ಅವರನ್ನು ಅಭಿನಂದಿಸಲಾಯಿತು. ಚಿತ್ರ ಕಲಾವಿದ ಮನೋಜ್ ಕನಪ್ಪಾಡಿ ಮತ್ತು ಹೆಣ್ಣು,ಗಂಡು ಸ್ವರದಲ್ಲಿ ಏಕ ಕಾಲದಲ್ಲಿ ಹಾಡುವ ಕಲಾವಿದ ರಾಜೇಶ್ ಸಜೀಪ ಅವರನ್ನು ಸನ್ಮಾನಿಸಲಾಯಿತು. ರೋಟರಿ ಕ್ಲಬ್ ಅಧ್ಯಕ್ಷರಾದ ಚಿತ್ತರಂಜನ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್, ಉಪ ಗವರ್ನರ್ ಮಂಜುನಾಥ್ ಆಚಾರ್ಯ ಅವರನ್ನು ಕ್ಲಬ್ ವತಿಯಿಂದ ಗೌರವಿಸಲಾಯಿತು. ಇದೇ ವೇಳೆ 2024-25ನೆ ಸಾಲಿನ ನೂತನ ಅಧ್ಯಕ್ಷರಾಗಿ ಕಿಶೋರ್ ಕುಮಾರ್ ಸರ್ವಾನುಮತದ ಆಯ್ಕೆಯನ್ನು ಪ್ರಕಟಿಸಲಾಯಿತು, ಕಾರ್ಯದರ್ಶಿ ಉಮೇಶ್ ಆರ್ ಮೂಲ್ಯ ಅವರು ತಿಂಗಳ ವರದಿ ವಾಚಿಸಿ ವಂದಿಸಿದರು
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…