ಬಂಟ್ವಾಳ

ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ವಾರ್ಷಿಕ ಸಹಮಿಲನ

ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ಇದರ ವಾರ್ಷಿಕ ಸಹಮಿಲನ ಕಾರ್ಯಕ್ರಮ ಸಂಚಯಗಿರಿಯಲ್ಲಿ ಭಾನುವಾರ ಸಂಜೆ ನಡೆಯಿತು. ಸ್ಥಳೀಯ ಹಿರಿಯ ನಾಗರಿಕ, ಪರಿಸರವಾದಿ . ದಾಮೋದರ ದೀಪ ಪ್ರಜ್ವಲಿಸಿದರು.

ಸಂಚಯಗಿರಿ ಪ್ರದೇಶ ಇಂದು ಕೇವಲ ಬಂಟ್ವಾಳಕ್ಕೆ ಮಾತ್ರ ಪರಿಚಿತವಾಗಿ ಉಳಿದಿಲ್ಲ. ಇಲ್ಲಿನ ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ಮೂಲಕ ದೇಶ ವಿದೇಶಗಳಲ್ಲೂ ಪರಿಚಿತವಾಗಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಚಾರ ಎಂದರು.

ಜಾಹೀರಾತು

ಮುಖ್ಯ ಅತಿಥಿಯಾಗಿದ್ದ ರಮಾಶಂಕರ್ ಮಾತನಾಡಿ ಸಂಚಯ ಎಂದರೆ ಸಂಗ್ರಹ, ಸಂಗ್ರಹವಾದಾಗ ಒಗ್ಗಟ್ಟಾಗುತ್ತದೆ. ಒಗ್ಗಟ್ಟು ಐಕ್ಯತೆ ಇರಬೇಕಾದರೆ ಸಹಯೋಗವೂ ಬೇಕು ಎಂದು ತಿಳಿಸಿದರು.

ನಾಗರಿಕ ಕ್ರಿಯಾ ಸಮಿತಿಯ ಅಧ್ಯಕ್ಷ ಸುರೇಶ್ ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಚಯಗಿರಿ ಬಡವಾಣೆಯ ನಾಗರಿಕರು ಹೃದಯವಂತರು. ನಾಗರಿಕ ಕ್ರಿಯಾ ಸಮಿತಿಯ ಮೂಲಕ ಯಾವುದೇ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಾಗ ಸಹಕಾರ ಹಾಗೂ ಪ್ರೋತ್ಸಾಹವನ್ನು ನೀಡುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಪೊಳಲಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ರಾಧಕೃಷ್ಣ ಭಟ್ ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತುಮುಖ್ಯ ಅತಿಥಿಯಾಗಿ ಪುರಸಭಾ ಸದಸ್ಯ ಹರಿಪ್ರಸಾದ್ ಭಾಗವಹಿಸಿದ್ದರು. ಸಮಿತಿಯ ಉಪಾಧ್ಯಕ್ಷೆ ಪ್ರಿಯಲತಾಗೌರವಾಧ್ಯಕ್ಷ  ನರಸಿಂಹ ರಾಜ ಹೊಳ್ಳಕ್ರೀಡಾ ಕಾರ್ಯದರ್ಶಿ ಪುರಂದರ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯದರ್ಶಿ ಶಿವನಾಯ್ಕ್ ಸ್ವಾಗತಿಸಿದರು. ಕೋಶಾಧಿಕಾರಿ ರಾಮಕೃಷ್ಣ ನಾಯ್ಕ್ ವಂದಿಸಿದರು. ಆಶಾಲತಾ ಸನ್ಮಾನ ಪತ್ರ ವಾಚಿಸಿದರುನಿವೃತ್ತ ಶಿಕ್ಷಕ ಸಂಕಪ್ಪ ಶೆಟ್ಟಿ, ಸುಧಾಕರ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು. ವಾರ್ಷಿಕೋತ್ಸವ  ಕಾರ್ಯಕ್ರಮದಂಗವಾಗಿ ಸ್ಥಳೀಯ ಪ್ರತಿಭೆಗಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts