ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ದ.ಕ. ಕೃಷಿ ಅಭಿವೃದ್ಧಿ ಸಹಕಾರಿ ಸಂಘ ಮಂಗಳೂರು, ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ಇದರ ಆಶ್ರಯದಲ್ಲಿ ಜ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇವರಿಂದ ಕಣ್ಣು, ದಂತ, ವೈದ್ಯಕೀಯ ಶಿಬಿರ ಹಾಗೂ ಕೇಂದ್ರ ಸರ್ಕಾರದ ನಿಕ್ಷಯ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಆಹಾರ ಧಾನ್ಯ ವಿತರಣಾ ಕಾರ್ಯಕ್ರಮ ಮಂಗಳವಾರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಉದ್ಘಾಟಿಸಿದರು. ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರಧಾನಿ ನರೆಂಧ್ರ ಮೋದಿಯವರ ಪರಿಕಲ್ಪನೆಯಂತೆ ಭಾರತವನ್ನು ಕ್ಷಯ ಮುಕ್ತ ರಾಷ್ಟ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸೇವಾಂಜಲಿ ಪ್ರತಿಷ್ಠಾನದ ಜೊತೆಗೂಡಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕ್ಷಯ ರೋಗಿಗಳು ರೋಗ ಮುಕ್ತರಾಗಿ ಸಮಾಜದ ಜನರೊಂದಿಗೆ ಬೆರೆತು ಬಾಳುವ ಉದ್ದೇಶದೊಂದಿಗೆ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಸಹಕಾರಿ ಸಂಘಗಳು ಸೇರಿಕೊಂಡಿರುವು ವಿಶೇಷ. ಜನರಿಗೆ ಆರ್ಥೀಕ ಸೇವೆ ನೀಡುವ ಸಹಕಾರಿ ಸಂಸ್ಥೆಗಳು ಇಂದು ಸಾರ್ವಜನಿಕರಿಗೆ ಆರೋಗ್ಯ ಸೇವೆ ನೀಡುವ ಸಮಾಜಮುಖಿ ಸೇವೆಯಲ್ಲೂ ತೊಡಗಿಸಿಕೊಂಡು ಸೇವಾಂಜಲಿಯ ಜೊತೆಗೂಡಿ ಆಹಾರದ ಕಿಟ್ ವಿತರಿಸಲಾಗುತ್ತಿದೆ ಎಂದರು.
ಮುಖ್ಯ ಅತಿಥಿ ಮೇರಮಜಲು ಗ್ರಾ.ಪಂ. ಅಧ್ಯಕ್ಷೆ ಜಯಶ್ರೀ ಕರ್ಕೆರಾ ಮಾತನಾಡಿ ಕೃಷ್ಣ ಕುಮಾರ್ ಪೂಂಜ ಅವರ ನೇತೃತ್ವದಲ್ಲಿ ಸೇವಾಂಜಲಿ ಸಂಸ್ಥೆಯು ಜನರಿಗೆ ವಿವಿಧ ರೀತಿಯ ಸೇವೆಗಳನ್ನು ನೀಡುತ್ತಾ ಬಡಜನರ ಕಣ್ಣೀರೊರೆಸುವ ಕಾರ್ಯವನ್ನು ನಡೆಸಿಕೊಂಡು ಬರುತ್ತಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ತಾ.ಪಂ. ಮಾಜಿ ಉಪಾಧ್ಯಕ್ಷ ಮಾಧವ ಮಾವೆ, ಮಂಗಳೂರಿನ ಅಂಬಾ ಭವಾನಿ ಭಜನಾ ಮಂದಿರದ ಅಧ್ಯಕ್ಷ ಸೀತಾರಾಮ ಎ., ದ.ಕ. ಕೃಷಿ ಅಭಿವೃದ್ಧಿ ಸಹಕಾರಿ ಸಂಘ ಮಂಗಳೂರು ಇದರ ಕಾರ್ಯನಿರ್ವಾಹಣಾಧಿಕಾರಿ ಪ್ರೇಮರಾಜ್ ಭಂಡಾರಿ, ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ಇದರ ಕಾರ್ಯ ನಿರ್ವಾಹಣಾಧಿಕಾರಿ ಧರ್ಮಪಾಲ್ ಭಂಡಾರಿ, ತಾ.ಪಂ. ಮಾಜಿ ಸದಸ್ಯ ಗಣೇಶ್ ಸುವರ್ಣ ತುಂಬೆ, ರೋಟರಿ ಕ್ಲಬ್ ಫರಂಗಿಪೇಟೆ ಅಧ್ಯಕ್ಷ ಜಯರಾಂ ಶೇಖ, ಜಯರಾಜ್ ಕರ್ಕೆರ, ಸೇವಾಂಜಲಿ ಆರೋಗ್ಯ ಕೇಂದ್ರದ ವೈದ್ಯ ಡಾ. ಚೇತನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಮುಖರಾದ ಪುಂಚಮೆ ಪದ್ಮನಾಭ ಶೆಟ್ಟಿ, ಎಂ.ಕೆ. ಖಾದರ್, ಪ್ರಕಾಶ್ ಕೆ., ಪ್ರಶಾಂತ್ ತುಂಬೆ ಮತ್ತಿತರರು ಉಪಸ್ಥಿತರಿದ್ದರು. ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ. ಕೃಷ್ಣಕುಮಾರ್ ಪೂಂಜ ಸ್ವಾಗತಿಸಿದರು. ಟ್ರಸ್ಟಿಗಳಾದ ತಾರಾನಾಥ ಕೊಟ್ಟಾರಿ ತೇವು ಪ್ರಾಸ್ತವಿಕವಾಗಿ ಮಾತನಾಡಿದರು, ದೇವದಾಸ್ ಶೆಟ್ಟಿ ಕೊಡ್ಮಾಣ್ ಕಾರ್ಯಕ್ರಮ ನಿರೂಪಿಸಿದರು
Be the first to comment on "ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಕಣ್ಣು, ದಂತ, ವೈದ್ಯಕೀಯ ಶಿಬಿರ ಹಾಗೂ ಕೇಂದ್ರ ಸರ್ಕಾರದ ನಿಕ್ಷಯ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಆಹಾರ ಧಾನ್ಯ ವಿತರಣಾ ಕಾರ್ಯಕ್ರಮ"