ರಸ್ತೆ ಬದಿ ನಿಂತಿದ್ದ ಶಾಲಾ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಒಕ್ಕೆತ್ತೂರು ಎಂಬಲ್ಲಿ ಸಂಭವಿಸಿದೆ.
ವಿಟ್ಲ ಒಕ್ಕೆತ್ತೂರು ನಿವಾಸಿ ಫಾತಿಮತ್ ನಿದಾ ಗಾಯಗೊಂಡ ವಿದ್ಯಾರ್ಥಿನಿ.
ಈಕೆ ವಿಟ್ಲ ಸರಕಾರಿ ಮಾದರಿ ಶಾಲೆಯ 5ನೇ ತರಗತಿ ವಿದ್ಯಾರ್ಥಿಯಾಗಿದ್ದು, ಶಾಲೆಗೆ ಹೋಗಲು ಒಕ್ಕೆತ್ತೂರಿನಲ್ಲಿ ಆಟೋ ರಿಕ್ಷಾಕ್ಕೆ ಕಾಯುತ್ತಿದ್ದಾಗ ವಿಟ್ಲ ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದು ಬಾಲಕಿಯನ್ನು ಎಳೆದುಕೊಂಡು ಹೋಗಿದೆ.
ತಕ್ಷಣವೇ ಸ್ಥಳೀಯರು ಬಾಲಕಿಯನ್ನು ಪುತ್ತೂರು ಆಸ್ಪತ್ರೆಗೆ ಕೊಂಡೊಯ್ದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…