ಬಂಟ್ವಾಳ: ಅಮ್ಮ ಚೇತೋಹಾರ ಎನ್ನುವ ವಿಶೇಷ ಕಾರ್ಯಕ್ರಮ ಬೋಳಂಗಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಡೆಯಿತು.
ಎಂ.ಎನ್.ಕುಮಾರ್ ಮೆಲ್ಕಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ನಗರ ಪೊಲೀಸ್ ಠಾಣೆಯ ಎಎಸೈ ಜಿನ್ನಪ್ಪ ಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಸುರೇಖ ಯಳವಾರ, ಪ್ರಕಾಶ್ ಎಂ., ಜನಾರ್ದನ ಕುಲಾಲ್ ಬೊಂಡಾಲ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಬೊಂಡಾಲ ಶಾಲೆಯಲ್ಲಿ ಕೈಗೊಂಡ ಅಭಿವೃದ್ಧಿ ಚಟುವಟಿಕೆಗಳಿಗಾಗಿ ಶಿಕ್ಷಕಿ ರೇಖಾ ಸಿ. ಎಚ್. ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ವಿಶೇಷ ಚೇತನ ಮಕ್ಕಳಿಗೆ ಸಹಾಯಧನ ಹಾಗೂ ಫಲಾನುಭವಿಗಳಿಗೆ ಗಾಲಿ ಕುರ್ಚಿಯನ್ನು ವಿತರಿಸಲಾಯಿತು.
ಪುರಸಭೆ ಮಾಜಿ ಸದಸ್ಯೆ ವಸಂತಿ ಗಂಗಾಧರ ಸ್ವಾಗತಿಸಿ, ಎಂ.ಎಚ್. ಮುಸ್ತಾಪ ಪ್ರಾಸ್ತವಿಕ ಮಾತುಗಳನ್ನಾಡಿದರು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಸಲೀಂ ಬೋಳಂಗಡಿ ವಂದಿಸಿದರು. ಮನೋಜ್ ವಾಮಂಜೂರು ಕಾರ್ಯಕ್ರಮ ನಿರೂಪಿಸಿದರು. ಅಮ್ಮಾ ಸ್ವೀಟ್ಸ್ ಸೇವಾ ಟ್ರಸ್ಟ್ ಸಂಸ್ಥೆಯ ಜನಾರ್ದನ ಅವರು ತನ್ನ ಸಹಪಾಠಿಗಳೊಂದಿಗೆ ತನ್ನ ದುಡಿಮೆಯ ಲಾಭದ ಒಂದಂಶ ಹಣವನ್ನು ಉಳಿತಾಯ ಮಾಡಿ ಸಂಗ್ರಹವಾದ ಒಟ್ಟು ಮೊತ್ತವನ್ನು ಸಮಾಜದ ಅಶಕ್ತರಿಗೆ ಹಾಗೂ ವಿಶೇಷ ಚೇತನ ಬಡಮಕ್ಕಳಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ೧೪ ವರ್ಷದಿಂದ ನಡೆಸಿಕೊಂಡು ಬರುತ್ತಿದ್ದಾರೆ.