ಬಂಟ್ವಾಳ

ಒಡ್ಡೂರು ಫಾರ್ಮ್ಸ್ ನಲ್ಲಿ ಸಹಕಾರಿ ಸಂಭ್ರಮ: ಮೊಬೈಲ್ ನಲ್ಲೇ ಪರೀಕ್ಷಿಸಬಹುದು ಅಭಿವೃದ್ಧಿಯ ನೋಟ- ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ಸಹಕಾರ ಪ್ರಕೋಷ್ಠದ ವತಿಯಿಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಒಡ್ಡೂರು ಫಾರ್ಮ್ ನಲ್ಲಿ ಭಾನುವಾರ ಸಹಕಾರಿ ಸಂಭ್ರಮ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್, ಜ.14ರಿಂದ ಕ್ಷೇತ್ರದ ಎಲ್ಲ ಗ್ರಾಮಗಳಿಗೂ ಸಂದರ್ಶಿಸಲಿದ್ದು, ಅಭಿವೃದ್ಧಿಯ ಪ್ರಗತಿನೋಟದೊಂದಿಗೆ ಸಲಹೆ ಸೂಚನೆಗಳನ್ನು ಸ್ವೀಕರಿಸಲಾಗುವುದು, ಜನರೊಂದಿಗೆ ಬೆರೆತು ಕೆಲಸ ಮಾಡಿದ ತೃಪ್ತಿ ತನಗಿದೆ ಎಂದರು. ಸಹಕಾರಿ ತತ್ವ ಕೃಷಿಗೆ ಪೂರಕವಾಗಿದ್ದು, ದೇಶದಲ್ಲಿ ಸಹಕಾರಿ ಇಲಾಖೆಗೆ ಶಕ್ತಿ ನೀಡುವ ಕಾರ್ಯ ನಡೆಯುತ್ತಿದೆ ಎಂದವರು ಹೇಳಿದರು.

ಜಾಹೀರಾತು

ತಂತ್ರಜ್ಞಾನ ಅಭಿವೃದ್ಧಿಗೊಂಡಿರುವ ಇಂದಿನ ದಿನಗಳಲ್ಲಿ ಕ್ಷೇತ್ರದಲ್ಲಾಗಿರುವ ಪ್ರಗತಿಯ ಸಂಪೂರ್ಣ ದಾಖಲೀಕರಣವನ್ನು ಪಡೆಯಬಹುದಾಗಿದ್ದು, ಬಂಟ್ವಾಳ ಕ್ಷೇತ್ರದ ಎಲ್ಲ ಸ್ತರಗಳಲ್ಲಿ ಅಭಿವೃದ್ಧಿ ಕಂಡಿದೆ, ಯಾರನ್ನೂ ವೈಯಕ್ತಿಕವಾಗಿ ವಿರೋಧಿಸದೆ, ಸೈದ್ಧಾಂತಿಕ ನೆಲೆಗಟ್ಟಿನಲ್ಲಿ ರಾಜಕಾರಣ ಮಾಡುತ್ತಾ ಬಂದಿದ್ದೇನೆ ಎಂದು ರಾಜೇಶ್ ನಾಯ್ಕ್ ಹೇಳಿದರು.

ಕಾರ್ಯಕ್ರಮವನ್ನು ಮಾಜಿ ಶಾಸಕ ಹಾಗೂ ಕಲ್ಲಡ್ಕ ರೈತರ ಸೇವಾ ಸಹಕಾರಿ ಅಧ್ಯಕ್ಷ ಕೆ.ಪದ್ಮನಾಭ ಕೊಟ್ಟಾರಿ ಉದ್ಘಾಟಿಸಿ ಮಾತನಾಡಿ, ಇಂದು ಸಹಕಾರ ಸಂಘಗಳು ಜನರಿಗೆ ನಂಬಿಕೆ ಬರುವ ರೀತಿಯಲ್ಲಿ ಕೆಲಸ ಮಾಡುತ್ತಿದ್ದು, ವಿಧಾನಸಭಾ ಕ್ಷೇತ್ರದಲ್ಲಿ 67 ಹಾಲು ಉತ್ಪಾದಕರ ಸಂಘಗಳು ಹಾಗೂ 20 ವ್ಯ.ಸೇ.ಸಂಘಗಳು ಇವೆ ಎಂದರು.

ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ ಮಾತನಾಡಿ, ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರಕಾರ ರೈತರಿಗೆ ಹಾಗೂ ಸಹಕಾರಿಗಳಿಗೆ ಉತ್ತಮ ನೆರವು ನೀಡುತ್ತಿದೆ ಎಂದರು.

ದಕ್ಷಿಣ ಕನ್ನಡ ಹಾಲು ಒಕ್ಕೂಟ ಅಧ್ಯಕ್ಷ  ಕೆ.ಪಿ.ಸುಚರಿತ ಶೆಟ್ಟಿ ಮಾತನಾಡಿ, ಹೈನುಗಾರರ ಪರವಾಗಿ ಒಕ್ಕೂಟ ಕೆಲಸ ಮಾಡುತ್ತಿದೆ ಎಂದರು. ಸಹಕಾರ ಕ್ಷೇತ್ರದ ಪ್ರಸಕ್ತ ಸನ್ನಿವೇಶಗಳ ಕುರಿತು ನಬಾರ್ಡ್ ನಿವೃತ್ತ ಅಧಿಕಾರಿ ವೆಂಕಟಸ್ವಾಮಿ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.

ಅಧ್ಯಕ್ಷತೆಯನ್ನು ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ವಹಿಸಿದ್ದರು. ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಅರುಣ್ ರೋಷನ್ ಡಿಸೋಜ, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಕೆಎಂಎಫ್ ನಿರ್ದೇಶಕರಾದ ಸುಧಾಕರ ರೈ, ಸವಿತಾ ಶೆಟ್ಟಿ, ನೇರಳಕಟ್ಟೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪುಷ್ಪರಾಜ್ ಚೌಟ, ಬಂಟ್ವಾಳ ತಾಲೂಕು ಸಹಕಾರ ಭಾರತಿ ಅದ್ಯಕ್ಷ ವಿಶ್ವನಾಥ ಎಂ, ಬುಡ ಅಧ್ಯಕ್ಷ ದೇವದಾಸ ಶೆಟ್ಟಿ, ರಾಜ್ಯ ಒಳಚರಂಡಿ ನಿಗಮ ನಿರ್ದೇಶಕಿ ಸುಲೋಚನಾ ಜಿ.ಕೆ.ಭಟ್, ಹಿರಿಯರಾದ ಸುಂದರ ಭಂಡಾರಿ ರಾಯಿ ಉಪಸ್ಥಿತರಿದ್ದರು. ಬಂಟ್ವಾಳ ಸಹಕಾರಿ ಪ್ರಕೋಷ್ಠದ ಸಂಚಾಲಕ ಜಯಶಂಕರ ಬಾಸ್ರಿತ್ತಾಯ ಸ್ವಾಗತಿಸಿದರು. ಬಿಜೆಪಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts