ವಿಟ್ಲ

ಅಭಿವೃದ್ಧಿಪರ ಚಿಂತನೆ ಬೇಡ ಎನ್ನುವುದು ಬಿಜೆಪಿ ದಿವಾಳಿತನಕ್ಕೆ ಸಾಕ್ಷಿ: ರಮಾನಾಥ ರೈ

ಜಾಹೀರಾತು

ಬಂಟ್ವಾಳ: ರಸ್ತೆ, ಮೋರಿ ಮೊದಲಾದ ಅಭಿವೃದ್ಧಿ ಪರ ಚಿಂತನೆಗಳು ಬೇಡ, ಲವ್ ಜಿಹಾದ್ ತಡೆಗಟ್ಟಲು ಬಿಜೆಪಿ ಗೆ ಮತ ನೀಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡುತ್ತಾರೆ ಎಂದಾದರೆ ಇದು ಬಿಜೆಪಿಯ ದಿವಾಳಿತನಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಘಟಕದ ವತಿಯಿಂದ ಮಾಣಿಯ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಜಾಹೀರಾತು

ಮತೀಯವಾದದ ಮೂಲಕ ಜನರನ್ನು ಒಡೆದು ಆಳುವ ನೀತಿಯನ್ನು ಮಾಡುತ್ತಿರುವ ಬಿಜೆಪಿಗೆ ರಾಹುಲ್ ಗಾಂಧಿ ಯವರ ಭಾರತ್ ಜೋಡೋ ಕಾರ್ಯಕ್ರಮವು ಸ್ಪಷ್ಟ ಉತ್ತರವನ್ನು ನೀಡುತ್ತಾ ಬಂದಿದೆ ಎಂದವರು ಹೇಳಿದರು. ನಾಗೇಶ್ ಉದ್ಯಾವರ ಹಾಗೂ ಉಮಾನಾಥ ಶೆಟ್ಟಿ ತರಬೇತಿ ಶಿಬಿರವನ್ನು ನಡೆಸಿಕೊಟ್ಟರು.

ಕೆಪಿಸಿಸಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪಿಯೂಸ್ ಎಲ್.ರೋಡ್ರಿಗಸ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ.ಪೂಜಾರಿ, ಅಲ್ಪ ಸಂಖ್ಯಾತ ಘಟಕಾದ್ಯಕ್ಷ ಅರ್ಷದ್ ಸರವು, ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಬಡಕಬೈಲ್ ಪಕ್ಷ ಪ್ರಮುಖರಾದ ಬಿ.ಎಂ.ಅಬ್ಬಾಸ್ ಅಲಿ, ಮುರಳೀಧರ ರೈ, ಕೆ.ಪದ್ಮನಾಭ ರೈ, ಸಂದೇಶ್ ಶೆಟ್ಟಿ ಬಿಕ್ನಾಜೆ ಮೊದಲಾದವರು ಉಪಸ್ಥಿತರಿದ್ದರು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ