ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಿಂಜೇಶ್ವರ ದೇವಾಲಯವನ್ನು ಸೂಕ್ಷ್ಮ ವಲಯವನ್ನಾಗಿ ಘೋಷಣೆ ಮಾಡುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿದ್ದು, ಜಿಲ್ಲಾಧಿಕಾರಿ ವರದಿ ಬಳಿಕ ಸರಕಾರ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ದ.ಕ.ಜಿಲ್ಲಾ ಉಸ್ತವಾರಿ ಸಚಿವ ಸುನಿಲ್ ಕುಮಾರ್ ಕಾರ್ಕಳ ತಿಳಿಸಿದರು. ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜೊತೆಗೆ ಕಾರಿಂಜೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಕಾರಿಂಜ ಸಾನಿಧ್ಯಕ್ಕೆ ಅಪಾಯ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಭಕ್ತರು ಹಾಗೂ ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರು ಶಾಸಕರು ಮತ್ತು ಸಚಿವರ ಗಮನಕ್ಕೆ ತಂದಿದ್ದರು. ಈಗಾಗಲೇ ಶಾಸಕ ರಾಜೇಶ್ ನಾಯ್ಕ್ ಅವರೊಂದಿಗೆ ಹಲವು ಬಾರಿ ಈ ಕುರಿತು ಚರ್ಚೆ ನಡೆಸಿದ್ದು, ಧಾರ್ಮಿಕ ಸೂಕ್ಷ್ಮ ಪ್ರದೇಶ ಘೋಷಣೆ ಮಾಡುವ ಕುರಿತು ನಿರ್ಧಾರಕ್ಕೆ ಬಂದಿರುವುದಾಗಿ ಅವರು ಹೇಳಿದರು.
ಕಾರಿಂಜ ಕ್ಷೇತ್ರವನ್ನು ಪ್ರವಾಸೋದ್ಯಮ ಇಲಾಖೆಯ ಮೂಲಕ ಅಭಿವೃದ್ಧಿ ಪಡಿಸಿ ಪ್ರವಾಸಿ ತಾಣವಾಗಿ ಮಾರ್ಪಾಡು ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಈ ಸಂದರ್ಭ ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ, ಪ್ರಮುಖರಾದ ವೆಂಕಟರಮಣ ಮುಚ್ಚಿನ್ನಾಯ, ಮಾದವ ಮಾವೆ, ಅಜಿತ್ ಶೆಟ್ಟಿ, ಜಯಲಕ್ಮೀ, ಸುದರ್ಶನ ಬಜ, ಪುರುಷೋತ್ತಮ ಶೆಟ್ಟಿ ವಾಮದಪದವು, ನರಸಿಂಹ ಮಾಣಿ, ರವಿ ಕೆಂಪುಗುಡ್ಡೆ, ಶರತ್ ಕುಮಾರ್, ರಮೇಶ್, ಗಣೇಶ್ ರೈ ಮಾಣಿ, ಪುಷ್ಪರಾಜ ಚೌಟ, ಹರೀಶ್ ಪ್ರಭು, ಶಿವಪ್ಪ ಗೌಡ, ರಾಮಕೃಷ್ಣ ಮಯ್ಯ, ಗಣೇಶ್ ಭಟ್, ಶುಭಕರ ಶೆಟ್ಟಿ, ಶಿವಪ್ರಸಾದ್ ಶೆಟ್ಟಿ ಅನೆಯಾಲಕೋಡಿ, ರವೀಶ್ ಶೆಟ್ಟಿ ಕರ್ಕಳ, ಗಣಿ ಇಲಾಖೆಯ ಅಧಿಕಾರಿ ಮಹಾದೇಶ್ವರ್, ಗ್ರಾಮಕರಣಿಕೆ ಆಶಾ ಮೆಹಂದಲೆ, ಮೆಸ್ಕಾಂ ಇ.ಇ.ಪ್ರಶಾಂತ್ ಪೈ ಮತ್ತಿತರರು ಉಪಸ್ಥಿತರಿದ್ದರು.
Be the first to comment on "ಸೂಕ್ಷ್ಮ ವಲಯವಾಗಿ ಕಾರಿಂಜ: ಸಿಎಂ ಜೊತೆ ಮಾತುಕತೆ – ಸುನೀಲ್ ಕುಮಾರ್"