ಬಂಟ್ವಾಳ: ಪಾಣೆಮಂಗಳೂರು ಸೇತುವೆ ಸಮೀಪ ನೇತ್ರಾವತಿ ನದಿಯಲ್ಲಿ ಹಿಂದು ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ರಾಜೇಶ್ ಎಂಬವರ ಶವ ಗುರುವಾರ ಬೆಳಗ್ಗೆ ಪತ್ತೆಯಾಗಿದ್ದು, ಈ ಕುರಿತು ಬಂಟ್ವಾಳ ನಗರ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸಜಿಪನಡು ಸಾನದಮನೆ ನಿವಾಸಿ ಹಿಂದುಪರ ಸಂಘಟನೆಗಳ ಮುಖಂಡ ರಾಜೇಶ್ ಸುವರ್ಣ ಎಂಬವರ ಶವ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಸೇತುವೆ ಬಳಿ ರಾತ್ರಿ ದ್ವಿಚಕ್ರ ವಾಹನವೊಂದು ಕಂಡುಬಂದಿದ್ದು, ಅದನ್ನು ಗಮನಿಸಿದ ಪೊಲೀಸರು ಅಗ್ನಿಶಾಮಕದಳದ ಹಾಗೂ ಸ್ಥಳೀಯರ ಸಹಾಯದಿಂದ ಹುಡುಕಾಟ ನಡೆಸಿದರು. ಈ ಸಂದರ್ಭ ನದಿಯಲ್ಲಿ ಶವ ಪತ್ತೆಯಾಗಿದೆ. ಘಟನೆಗೆ ಕಾರಣವಿನ್ನೂ ಗೊತ್ತಾಗಬೇಕಿದ್ದು, ತನಿಖೆ ಸಾಗಿದೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…