ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಗ್ರಾಮವಾಸ್ತವ್ಯ ಕಾರ್ಯಕ್ರಮ ಈ ಬಾರಿ ಜನವರಿ 21ರಂದು ಬಂಟ್ವಾಳ ತಾಲೂಕಿನ ಮಾಣಿಲ ಗ್ರಾಮದಲ್ಲಿ ಇರಲಿದೆ.
ಮಾಣಿಲದ ಮುರುವದಲ್ಲಿರುವ ಸರಕಾರಿ ಪ್ರೌಢಶಾಲೆಯಲ್ಲಿ ಜ.21ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲಾ ತಾಲೂಕು ಮಟ್ಟದ ಎಲ್ಲ ಇಲಾಖಾಧಿಕಾರಿಗಳು ಹಾಜರಿರುತ್ತಾರೆ. ಗ್ರಾಮವಾಸ್ತವ್ಯದಲ್ಲಿ ಕಂದಾಯ ಮತ್ತು ಇತರ ಇಲಾಖೆಗಳ ಸವಲತ್ತು ವಿತರಣೆ, ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರೊಂದಿಗೆ ಸಮಾಲೋಚಿಸಬಹುದಾಗಿದೆ. ಯಾವುದಾದರೂ ಅಹವಾಲುಗಳು ಮಾಣಿಲ ಗ್ರಾಮಕ್ಕೊಳಪಟ್ಟು ಇರುವುದಾದರೆ, ಜನವರಿ 19ರೊಳಗೆ ಗ್ರಾಮ ಪಂಚಾಯಿತಿ ದೂರು ಪೆಟ್ಟಿಗೆ, ಗ್ರಾಮಲೆಕ್ಕಿಗರಿಗೆ ಅಥವಾ ತಾಲೂಕು ಕಚೇರಿಗೆ ಖುದ್ದಾಗಿ ಸಲ್ಲಿಸಲು ಪ್ರಕಟಣೆಯಲ್ಲಿ ತಹಸೀಲ್ದಾರ್ ಕೋರಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ಈ ಬಾರಿ ದ.ಕ.ಜಿಲ್ಲಾಧಿಕಾರಿ ಗ್ರಾಮವಾಸ್ತವ್ಯ ಮಾಣಿಲದಲ್ಲಿ"