ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಪ್ರಯುಕ್ತ ಯುವ ಸಪ್ತಾಹ, ವಿವೇಕ ರಥಕ್ಕೆ ಸ್ವಾಗತ, ಯುವ ಪಥ, ಯುವ ಜಾಗೃತಿ ಕಾರ್ಯಕ್ರಮ ಶುಕ್ರವಾರ ಮಧ್ಯಾಹ್ನ ದ.ಕ.ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ.ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು, ತಾಲೂಕು ಯುವಜನ ಒಕ್ಕೂಟ ಬಂಟ್ವಾಳ ಹಾಗೂ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ ಆಶ್ರಯದಲ್ಲಿ ನಡೆಯಿತು.
ಕಲ್ಲಡ್ಕ ಪೇಟೆಯಲ್ಲಿ ಸ್ವಾಮಿ ವಿವೇಕಾನಂದರ ಸ್ತಬ್ದ ಚಿತ್ರದ ರಥವನ್ನು ಶಾಸಕ ರಾಜೇಶ್ ನಾಯ್ಕ್ ಹಾಗೂ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಪುಷ್ಪಾರ್ಚನೆಯ ಮಾಡುವ ಮೂಲಕ ಸ್ವಾಗತಿಸಿದರು.
ಬಳಿಕ ಕಾಲೇಜಿನ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಪ್ರಭಾಕರ ಭಟ್, ದೇಶದ ಪರಂಪರೆ, ಸಂಸ್ಕೃತಿಯ ಅರಿವು ವಿದ್ಯಾರ್ಥಿಗಳ ಮೂಲಕ ಜನತೆಗೆ ಆಗಬೇಕು ಎಂದರು. ಪ್ರಿನ್ಸಿಪಾಲ್ ಕೃಷ್ಣ ಪ್ರಸಾದ್ ಕಾಯರ್ ಕಟ್ಟೆ, ಇಲಾಖೆ ನಿರ್ದೇಶಕ ರಾಕೇಶ್ ರೈ ಕಡೆಂಜ, ಯುವಜನ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಇಲಾಖೆಯ ಜಿಲ್ಲಾ ನೋಡಲ್ ಅಧಿಕಾರಿ ಮಾಮಚ್ಚನ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ನವೀನ್ ಪಿ.ಎಸ್, ಜಿಪಂ ಮಾಜಿ ಸದಸ್ಯ ಚೆನ್ನಪ್ಪ ಆರ್ ಕೋಟ್ಯಾನ್ ಉಪಸ್ಥಿತರಿದ್ದರು. ಬಂಟ್ವಾಳ ಯುವಜನ ಒಕ್ಕೂಟದ ಕಾರ್ಯದರ್ಶಿ ದಿನೇಶ್ ಅಮ್ಟೂರು ಸ್ವಾಗತಿಸಿದರು. ವಿದ್ಯಾರ್ಥಿನಿ ಹರ್ಷಿತಾ ಎನ್ . ವಂದಿಸಿದರು. ವಿದ್ಯಾರ್ಥಿ ಜಯ್ ದೀಪ್ ಕಾರ್ಯಕ್ರಮ ನಿರೂಪಿಸಿದರು.