ಜನವರಿ 21ರಿಂದ 29ರವರೆಗೆ ಬಂಟ್ವಾಳದ ಬಿಜೆಪಿಯ 59 ಶಕ್ತಿಕೇಂದ್ರಗಳಲ್ಲಿ ವಿಜಯ ಸಂಕಲ್ಪ ಅಭಿಯಾನ ನಡೆಯಲಿದೆ ಎಂದು ನೀರಪಾದೆಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ತಿಳಿಸಿದ್ದಾರೆ.
ಈಗಾಗಲೇ ವ್ಯವಸ್ಥಿತವಾಗಿ ಪೂರ್ವಭಾವಿ ಸಿದ್ಧತೆಗಳು ನಡೆದಿವೆ. ಶಕ್ತಿಕೇಂದ್ರದ ಸಭೆಗಳನ್ನು ನಡೆಸಿ ಬಿಜೆಪಿ ಬಂಟ್ವಾಳ ಕ್ಷೇತ್ರವನ್ನು ಗೆಲ್ಲುವ ಗುರಿ ಹಾಕಿದೆ ಎಂದ ಅವರು, 249 ಬೂತ್ ಗಳಲ್ಲಿ ನಮ್ಮ ಕಾರ್ಯಕರ್ತರು ಸಾಧನೆಯನ್ನು ಮನೆಮನೆಗೆ ತಲುಪಿಸಲಿದ್ದಾರೆ. 10 ವಿಭಾಗಗಳಲ್ಲಿ 8 ಮಹಾಶಕ್ತಿಕೇಂದ್ರಗಳ, 59 ಶಕ್ತಿಕೇಂದ್ರಗಳಲ್ಲಿ ಈ ಅಭಿಯಾನ ಕೈಗೊಳ್ಳಲಾಗುತ್ತದೆ ಎಂದರು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಭಿಯಾನಕ್ಕೆ ಚಾಲನೆ ನೀಡಲಿದ್ದು, 50 ಸಾವಿರ ಮಂದಿಯನ್ನು ಬಿಜೆಪಿ ಸದಸ್ಯರನ್ನಾಗಿ ಮಾಡುವ ಗುರಿಯನ್ನು ಪಕ್ಷ ಹೊಂದಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಅಭಿಯಾನ ಸಂಚಾಲಕ ಸುದರ್ಶನ ಬಜ, ಸಹಸಂಚಾಲಕರಾದ ರಮನಾಥ ರಾಯಿ, ಯಶೋಧರ ಕರ್ಬೆಟ್ಟು, ವಜ್ರನಾಥ ಕಲ್ಲಡ್ಕ, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ಶೆಟ್ಟಿ ಕರ್ಕಳ, ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಪ್ರಮುಖರಾದ ಸುಲೋಚನಾ ಜಿ.ಕೆ.ಭಟ್, ಮಾಧವ ಮಾವೆ, ಚೆನ್ನಪ್ಪ ಕೋಟ್ಯಾನ್ ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…