ನೀರಿಂದ ಹೊರಗೆ ಬಂದ ಮೀನಿನಂತಿರುವ ಕಾಂಗ್ರೆಸ್ ಅಧಿಕಾರಕ್ಕಾಗಿ ಪ್ರಜಾಧ್ವನಿ ಯಾತ್ರೆ ಮಾಡುತ್ತಿದ್ದು, ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಅಸಾಧ್ಯ. ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಗೆ ಹೋದಲ್ಲೆಲ್ಲಾ ಕಾಂಗ್ರೆಸ್ ಸೋಲನ್ನೇ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಸೋಮವಾರ ಸಂಜೆ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಗ್ರಾಮದೆಡೆಗೆ ಶಾಸಕರ ನಡಿಗೆ ಪಾದಯಾತ್ರೆಯಲ್ಲಿ ಹೆಜ್ಜೆಹಾಕಿದ ಬಳಿಕ ರಾಯಿ ಸಮೀಪ ಕೊಯ್ಲ ಎಂಬಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಾಸಕರಾಗಿ ರಾಜೇಶ್ ನಾಯ್ಕ್ ಅವರು ಎಲ್ಲ ಧರ್ಮರವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರು ಸಾವಿರ ಕೋಟಿ ರೂಪಾಯಿ ಅನುದಾನ ನೀಡಿರುವುದನ್ನು ಗಮನಿಸಿದರೆ, ಕ್ಷೇತ್ರದ ಕುರಿತ ಸಂಬಂಧವನ್ನು ಸೂಚಿಸುತ್ತದೆ ಎಂದು ವಿಜಯೇಂದ್ರ ಹೇಳಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ ಪಕ್ಷ ನೀಡಿದ ಜವಾಬ್ದಾರಿಯನ್ನು ಶಾಸಕನಾಗಿ ನಿರ್ವಹಿಸಿದ್ದು, ಜನರ ಸೇವೆ ಮಾಡಿದ ತೃಪ್ತಿ ಇದೆ ಎಂದರು.
ಕಾಸರಗೋಡು ಬಿಜೆಪಿ ಅದ್ಯಕ್ಷ ಕುಂಟಾರು ರವೀಶ ತಂತ್ರಿ ಮಾತನಾಡಿದರು. ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ರಾಜ್ಯ ಒಳಚರಂಡಿ ನಿಗಮ ನಿರ್ದೇಶಕಿ ಸುಲೋಚನಾ ಜಿ.ಕೆ.ಭಟ್, ಯಾತ್ರೆಯ ಸಂಚಾಲಕ ಬಿ.ದೇವದಾಸ ಶೆಟ್ಟಿ, ಸಹಸಂಚಾಲಕರಾದ ಸುದರ್ಶನ ಬಜ, ಮಾಧವ ಮಾವೆ, ಪಕ್ಷದ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ಕರ್ಕಳ, ಡೊಂಬಯ ಅರಳ, ಕಾವಳಮೂಡೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ರಮನಾಥ ರಾಯಿ, ಜಿಲ್ಲಾ ಮಾಧ್ಯಮ ಪ್ರಮುಖರಾದ ಸಂದೇಶ್ ಶೆಟ್ಟಿ, ಪಂಜಿಕಲ್ಲು ಗ್ರಾಪಂ ಅಧ್ಯಕ್ಷರಾದ ಸತೀಶ್ ಪೂಜಾರಿ, ರಾಯಿ ಗ್ರಾಪಂ ರತ್ನಾ ಆನಂದ ಸಹಿತ ಪ್ರಮುಖರು ಹಾಜರಿದ್ದರು. ರಶ್ಮಿತ್ ಶೆಟ್ಟಿ ಕೈತ್ರೋಡಿ ಕಾರ್ಯಕ್ರಮ ನಿರ್ವಹಿಸಿದರು.
Be the first to comment on "ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ – ಬಿ.ವೈ.ವಿಜಯೇಂದ್ರ ವಿಶ್ವಾಸ"