ಜಿಲ್ಲಾ ಸುದ್ದಿ

ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ – ಬಿ.ವೈ.ವಿಜಯೇಂದ್ರ ವಿಶ್ವಾಸ

ನೀರಿಂದ ಹೊರಗೆ ಬಂದ ಮೀನಿನಂತಿರುವ ಕಾಂಗ್ರೆಸ್ ಅಧಿಕಾರಕ್ಕಾಗಿ ಪ್ರಜಾಧ್ವನಿ ಯಾತ್ರೆ ಮಾಡುತ್ತಿದ್ದು, ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಅಸಾಧ್ಯ. ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಗೆ ಹೋದಲ್ಲೆಲ್ಲಾ ಕಾಂಗ್ರೆಸ್ ಸೋಲನ್ನೇ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಸೋಮವಾರ ಸಂಜೆ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಗ್ರಾಮದೆಡೆಗೆ ಶಾಸಕರ ನಡಿಗೆ ಪಾದಯಾತ್ರೆಯಲ್ಲಿ ಹೆಜ್ಜೆಹಾಕಿದ ಬಳಿಕ ರಾಯಿ ಸಮೀಪ ಕೊಯ್ಲ ಎಂಬಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಾಸಕರಾಗಿ ರಾಜೇಶ್ ನಾಯ್ಕ್ ಅವರು ಎಲ್ಲ ಧರ್ಮರವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರು ಸಾವಿರ ಕೋಟಿ ರೂಪಾಯಿ ಅನುದಾನ ನೀಡಿರುವುದನ್ನು ಗಮನಿಸಿದರೆ, ಕ್ಷೇತ್ರದ ಕುರಿತ ಸಂಬಂಧವನ್ನು ಸೂಚಿಸುತ್ತದೆ ಎಂದು ವಿಜಯೇಂದ್ರ ಹೇಳಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ ಪಕ್ಷ ನೀಡಿದ ಜವಾಬ್ದಾರಿಯನ್ನು ಶಾಸಕನಾಗಿ ನಿರ್ವಹಿಸಿದ್ದು, ಜನರ ಸೇವೆ ಮಾಡಿದ ತೃಪ್ತಿ ಇದೆ ಎಂದರು.
ಕಾಸರಗೋಡು ಬಿಜೆಪಿ ಅದ್ಯಕ್ಷ ಕುಂಟಾರು ರವೀಶ ತಂತ್ರಿ ಮಾತನಾಡಿದರು. ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ರಾಜ್ಯ ಒಳಚರಂಡಿ ನಿಗಮ ನಿರ್ದೇಶಕಿ ಸುಲೋಚನಾ ಜಿ.ಕೆ.ಭಟ್,  ಯಾತ್ರೆಯ ಸಂಚಾಲಕ ಬಿ.ದೇವದಾಸ ಶೆಟ್ಟಿ, ಸಹಸಂಚಾಲಕರಾದ ಸುದರ್ಶನ ಬಜ, ಮಾಧವ ಮಾವೆ, ಪಕ್ಷದ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ಕರ್ಕಳ, ಡೊಂಬಯ ಅರಳ, ಕಾವಳಮೂಡೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ರಮನಾಥ ರಾಯಿ, ಜಿಲ್ಲಾ ಮಾಧ್ಯಮ ಪ್ರಮುಖರಾದ ಸಂದೇಶ್ ಶೆಟ್ಟಿ, ಪಂಜಿಕಲ್ಲು ಗ್ರಾಪಂ ಅಧ್ಯಕ್ಷರಾದ ಸತೀಶ್ ಪೂಜಾರಿ, ರಾಯಿ ಗ್ರಾಪಂ ರತ್ನಾ ಆನಂದ ಸಹಿತ ಪ್ರಮುಖರು ಹಾಜರಿದ್ದರು. ರಶ್ಮಿತ್ ಶೆಟ್ಟಿ ಕೈತ್ರೋಡಿ ಕಾರ್ಯಕ್ರಮ ನಿರ್ವಹಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ