ಬಂಟ್ವಾಳ

ಜನರ ಪ್ರೀತಿ ವಿಶ್ವಾಸದೊಂದಿಗೆ ಪಕ್ಷ ಬಲಗೊಳಿಸುವ ಕಾರ್ಯ: ಕುರಿಯಾಳದಲ್ಲಿ ರಾಜೇಶ್ ನಾಯ್ಕ್

ಜಾಹೀರಾತು

ಜನರು ನೀಡಿದ ಪ್ರೀತಿ, ವಿಶ್ವಾಸವನ್ನು ಇಟ್ಟುಕೊಂಡು ಪಕ್ಷವನ್ನು ಗಟ್ಟಿಗೊಳಿಸುವ ಕಾರ್ಯ ಮಾಡೋಣ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು.

ಅವರು ಬಂಟ್ವಾಳ ಬಿಜೆಪಿ ವತಿಯಿಂದ ನಡೆಯುತ್ತಿರುವ ಗ್ರಾಮ ವಿಕಾಸ ನಡಿಗೆ- ಗ್ರಾಮದೆಡೆಗೆ ಶಾಸಕರ ನಡಿಗೆ 11ನೇ ದಿನದ ಪಾದಯಾತ್ರೆಯ ಬಳಿಕ ಕುರಿಯಾಳ ದುರ್ಗಾನಗರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಂಗಳವಾರ ಸಂಜೆ ಮಾತನಾಡಿದರು.

ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಮಾತನಾಡಿ ಮುಂದಿನ ಚುನಾವಣೆ ನಮ್ಮ ಅಸ್ಮಿತೆಯ ಪ್ರಶ್ನೆಯಾಗಿದ್ದು, ಬಿಜೆಪಿಯನ್ನು ಗೆಲ್ಲಿಸುವ ಕಾರ್ಯ ಮಾಡೋಣ ಎಂದರು.

ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ‌ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಮಾಜಿ ಸದಸ್ಯೆ ಕಮಲಾಕ್ಷಿ ಪೂಜಾರಿ, ಅಮ್ಟಾಡಿ ಗ್ರಾ.ಪಂ.ಅಧ್ಯಕ್ಷೆ ಮೋಹಿನಿ, ಉಪಾಧ್ಯಕ್ಷ ಸುನೀಲ್ ಕಾಯರ್ ಮಾರ್, ಯಾತ್ರೆಯ ಸಹಸಂಚಾಲಕರಾದ ಮಾಧವ ಮಾವೆ, ಸುದರ್ಶನ್ ಬಜ, ಗ್ರಾ.ಪಂ.ಸದಸ್ಯರಾದ ಯಶೋಧ, ಅಶ್ವಿನಿ ಶೆಟ್ಟಿ, ಶ್ರೀದೇವಿ, ಸುಹಾಸಿನಿ, ಬೂತ್ ಅಧ್ಯಕ್ಷರಾದ ಪ್ರದೀಪ್ ಮಾರ್ಲ ಕುಟಿಲ, ಸುರೇಂದ್ರ ಶೆಟ್ಟಿ ಪಾಪುದಡ್ಕ, ಸಹಸಂಚಾಲಕ ರೂಪೇಶ್ ಕುಟಿಲ ಉಪಸ್ಥಿತರಿದ್ದರು. ಯಾತ್ರೆಯ ಸಂಚಾಲಕ ಬಿ.ದೇವದಾಸ್ ಶೆಟ್ಟಿ ಅವರು ಕ್ಷೇತ್ರದ ಅನುದಾನ, ಅಭಿವೃದ್ಧಿ ಕಾಮಗಾರಿಗಳ ವಿವರ ನೀಡಿದರು. ಕುರಿಯಾಳ ಶಕ್ತಿಕೇಂದ್ರದ ಸಂಚಾಲಕ ಹರೀಶ್ ಶೆಟ್ಟಿ ಪಡು ಸ್ವಾಗತಿಸಿದರು.  ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಕಾರ್ಯಕ್ರಮ ನಿರ್ವಹಿಸಿದರು.

odiyoor

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts