ಕಲ್ಲಡ್ಕ

ಮಾಣಿ ಬ್ರಹ್ಮಕಲಶೋತ್ಸವ: ಸುವರ್ಣ ಮಂಟಪದಲ್ಲಿ ರಾಮದೇವರ ಪೂಜೆ

ಮಾಣಿ ಶ್ರೀ ರಾಮಚಂದ್ರಾಪುರ ಮಠದಲ್ಲಿ ನೂತನವಾಗಿ ನಿರ್ಮಿಸಿರುವ ಶಿಲಾಮಯ ಗರ್ಭಾಗಾರದಲ್ಲಿ ಸಪರಿವಾರ ಸಹಿತ ರಾಮದೇವರ ಪುನಃಪ್ರತಿಷ್ಠೆ ಬ್ರಹ್ಮಕಲಶೋತ್ಸವ ಅಂಗವಾಗಿ ಮಂಗಳವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ಜಾಹೀರಾತು

ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಂದ ಸಪರಿವಾರ ಸಹಿತ ಶ್ರೀ ಸೀತಾರಾಮಚಂದ್ರ, ಚಂದ್ರಮೌಳೀಶ್ವರ ಮತ್ತು ರಾಜರಾಜೇಶ್ವರಿ ದೇವರಿಗೆ ಸುವರ್ಣ ಮಂಟಪದಲ್ಲಿ ವಿಶೇಷ ಪೂಜೆ ಮತ್ತು ಅಷ್ಟಾವಧಾನ ಸೇವೆ ನಡೆಯಿತು.

odiyoor

ಸೋಮವಾರ ಪುನಃಪ್ರತಿಷ್ಠೆಯ ಬಳಿಕ ಇಂದು ಮಹಾಶಾಂತಿ ಹವನ, ಪ್ರಾಯಶ್ಚಿತ ಹವನ, ಸೂಕ್ತಹವನ, ನವಚಂಡೀಹವನ ಮತ್ತು ಐಕಮತ್ಯ ಹವನ ಗೋಕರ್ಣದ ತಂತ್ರಿಗಳಾದ ಶ್ರೀ ಅಮೃತೇಶ ಭಟ್ಟ ಹಿರೇ ಅವರ ನೇತೃತ್ವದಲ್ಲಿ ನಡೆದವು. ಶ್ರೀಮಠದ ಧರ್ಮಕರ್ಮ ವಿಭಾಗದ ಮುಖ್ಯಸ್ಥ ಕೇಶವ ಭಟ್ ಕೂಟೇಲು, ಅಮೈ ಶಿವಪ್ರಸಾದ್ ಭಟ್ ಮತ್ತಿತರರು ಪಾಲ್ಗೊಂಡಿದ್ದರು. ಸಂಜೆ ಕುಂಭೇಶ ಪೂಜೆ, ರಾಜೋಪಚಾರ ಸೇವೆ ಮತ್ತು ಶ್ರೀದುರ್ಗಾಪೂಜೆ ನೆರವೇರಿತು.

ಬುಧವಾರ ಶ್ರೀ ರಾಘವೇಶ್ವರ ಭಾರತೀಸ್ವಾಮೀಜಿಯವರಿಂದ ಬ್ರಹ್ಮಕಲಶೋತ್ಸವ ನಡೆಯಲಿದೆ. ಬುಧವಾರ ಮೂಲಮಂತ್ರ ಹವನ, ಸೂಕ್ತಹವನ, ಗಣಪತಿ ಅಥರ್ವಶೀರ್ಷ ಹವನ, ಶ್ರೀ ರುದ್ರಹವನ, ಪರಿವಾರ ದೇವರಿಗೆ ನವಕಾಭಿಷೇಕ ನಡೆಯಲಿದೆ ಎಂದು ಶ್ರೀಮಠದ ಮಹಾಸಮಿತಿ ಅಧ್ಯಕ್ಷ ಹಾರಕೆರೆ ನಾರಾಯಣ ಭಟ್ ಮತ್ತು ಕಾರ್ಯದರ್ಶಿ ಬಂಗಾರಡ್ಕ ಜನಾರ್ದನ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ,

ಮಧ್ಯಾಹ್ನ ಬ್ರಹ್ಮಕಲಶದ ಬಳಿಕ ನಿಯನೈಮಿತ್ತಿಕ ನಿರ್ಣಯ, ಪ್ರಾರ್ಥನೆ, ಪ್ರಸಾದ ವಿತರಣೆ, ಸಂಜೆ ಆಶ್ಲೇಷ ಬಲಿ ಇರುತ್ತದೆ. ಸಾವಿರಾರು ಮಂದಿ ಭಕ್ತರು ಸುವರ್ಣ ಮಂಟಪದಲ್ಲಿ ವಿರಾಜಮಾನರಾದ ರಾಮದೇವರನ್ನು ನೋಡಿ ಕಣ್ತುಂಬಿಕೊಂಡರು. ಬೆಳಿಗ್ಗೆ ವಿವಿಧ ತಂಡಗಳಿಂದ ಭಜನೆ, ಸಂಜೆ ಆಕರ್ಷಕ ಸಾಂಸ್ಕøತಿಕ ಕಾರ್ಯಕ್ರಮಗಳು ನೆರವೇರಿದವು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.