ಬಂಟ್ವಾಳ: ಕೇಂದ್ರ ಚುನಾವಣಾ ಆಯೋಗದ ಸಂಸ್ಥಾಪನಾ ದಿನದ ಅಂಗವಾಗಿ ಗುರುವಾರ ಬಂಟ್ವಾಳ ತಾಲೂಕು ಆಡಳಿತದ ವತಿಯಿಂದ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಯಿತು.
ಈ ಸಂದರ್ಭ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ತಹಶೀಲ್ದಾರ್ ದಯಾನಂದ ಕೆ .ಎಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಮತದಾನದ ಮಹತ್ವದ ಬಗ್ಗೆ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಮಾತನಾಡಿದರು.
ಮತದಾರರ ದಿನಾಚರಣೆಯ ಬಗ್ಗೆ ಮಾಹಿತಿ ನೀಡಿದ ಉಪನ್ಯಾಸಕ ಹಾಗೂ ತಾಲೂಕು ಚುನಾವಣೆಯ ಮುಖ್ಯ ತರಬೇತುದಾರರಾದ ಅಬ್ದುಲ್ ರಝಾಕ್ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿದೆಯೇ ಎಂದು ಪರಿಶೀಲಿಸಿ ಖಚಿತಪಡಿಸಿಕೊಂಡು ಎಲ್ಲರೂ ತಪ್ಪದೇ ನಿಮ್ಮ ಹಕ್ಕನ್ನು ಚಲಾಯಿಸಿ ಎಂದು ಕರೆ ನೀಡಿದರು.
ಈ ಸಂದರ್ಭ ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕರಾದ ವಿಜಯ .ಆರ್ , ಚುನಾವಣೆ ಶಾಖೆಯ ಸಿಬ್ಬಂದಿಗಳು ಕಚೇರಿ ಸಿಬ್ಬಂದಿಗಳು. ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು, ಶಿಕ್ಷಕರು, ವಿದ್ಯಾರ್ಥಿಗಳು, ಬಿ.ಎಲ್.ಓ ಗಳು ಹಾಜರಿದ್ದರು. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ವಿಶೇಷ ಸಾಧನೆಗೈದವರಿಗೆ ಮತ್ತು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಂಸಾ ಪತ್ರ ವಿತರಿಸಲಾಯಿತು.
ಚುನಾವಣೆ ಉಪತಹಸೀಲ್ದಾರ್ ನವೀನ್ ಬೆಂಜನಪದವು ಅವರು ಮಾಹಿತಿ ನೀಡಿದರು. ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕರಾದ ಜನಾರ್ಧನ ಜೆ .ಸ್ವಾಗತಿಸಿದರು. ಗ್ರಾಮ ಆಡಳಿತ ಅಧಿಕಾರಿ ಅನಿಲ್. ಕೆ .ಪೂಜಾರಿ ವಂದಿಸಿದರು. ಚುನಾವಣಾ ಶಾಖೆಯ ವಿಷಯ ನಿರ್ವಾಹಕ ನಾರಾಯಣ ಗೌಡ ಕಾರ್ಯಕ್ರಮ ನಿರೂಪಿಸಿದರು