ಬಂಟ್ವಾಳ

ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

ಬಂಟ್ವಾಳ: ಕೇಂದ್ರ  ಚುನಾವಣಾ ‌ ಆಯೋಗದ ಸಂಸ್ಥಾಪನಾ ದಿನದ ಅಂಗವಾಗಿ ಗುರುವಾರ ಬಂಟ್ವಾಳ ತಾಲೂಕು ಆಡಳಿತದ ವತಿಯಿಂದ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ  ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಯಿತು.

ಈ ಸಂದರ್ಭ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ತಹಶೀಲ್ದಾರ್ ದಯಾನಂದ ಕೆ .ಎಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಮತದಾನದ ಮಹತ್ವದ ಬಗ್ಗೆ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಮಾತನಾಡಿದರು.

ಜಾಹೀರಾತು

ಮತದಾರರ ದಿನಾಚರಣೆಯ ಬಗ್ಗೆ ಮಾಹಿತಿ ನೀಡಿದ ಉಪನ್ಯಾಸಕ ಹಾಗೂ ತಾಲೂಕು ಚುನಾವಣೆಯ ಮುಖ್ಯ ತರಬೇತುದಾರರಾದ ಅಬ್ದುಲ್ ರಝಾಕ್ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿದೆಯೇ ಎಂದು ಪರಿಶೀಲಿಸಿ ಖಚಿತಪಡಿಸಿಕೊಂಡು ಎಲ್ಲರೂ ತಪ್ಪದೇ ನಿಮ್ಮ ಹಕ್ಕನ್ನು ಚಲಾಯಿಸಿ ಎಂದು ಕರೆ ನೀಡಿದರು.

ಜಾಹೀರಾತು

ಈ ಸಂದರ್ಭ ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕರಾದ ವಿಜಯ .ಆರ್ , ಚುನಾವಣೆ ಶಾಖೆಯ ಸಿಬ್ಬಂದಿಗಳು ‌ಕಚೇರಿ ಸಿಬ್ಬಂದಿಗಳು. ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು, ಶಿಕ್ಷಕರು, ವಿದ್ಯಾರ್ಥಿಗಳು,  ಬಿ.ಎಲ್.ಓ ಗಳು ಹಾಜರಿದ್ದರು. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ವಿಶೇಷ ಸಾಧನೆಗೈದವರಿಗೆ ಮತ್ತು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಂಸಾ ಪತ್ರ ವಿತರಿಸಲಾಯಿತು.

ಜಾಹೀರಾತು

ಚುನಾವಣೆ ಉಪತಹಸೀಲ್ದಾರ್ ನವೀನ್ ಬೆಂಜನಪದವು ಅವರು ಮಾಹಿತಿ ನೀಡಿದರು. ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕರಾದ ಜನಾರ್ಧನ ಜೆ .ಸ್ವಾಗತಿಸಿದರು. ಗ್ರಾಮ ಆಡಳಿತ ಅಧಿಕಾರಿ ಅನಿಲ್. ಕೆ .ಪೂಜಾರಿ ವಂದಿಸಿದರು. ಚುನಾವಣಾ ಶಾಖೆಯ ವಿಷಯ ನಿರ್ವಾಹಕ ನಾರಾಯಣ ಗೌಡ ಕಾರ್ಯಕ್ರಮ ನಿರೂಪಿಸಿದರು

ಜಾಹೀರಾತು

ಜಾಹೀರಾತು

ಜಾಹೀರಾತು

odiyoor

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ