ಭಾರತ್ ಫ್ರೆಂಡ್ಸ್ ಕ್ಲಬ್ ಇರಾ ಸಂಸ್ಥೆಯ ಬೆಳ್ಳಿಹಬ್ಬದ ಸಂಭ್ರಮಾಚರಣೆಯ ಪ್ರಯುಕ್ತ ರಾಷ್ಟ್ರೀಯ ಮಟ್ಟದ ‘ಎ’ ಗ್ರೇಡ್ ಇರಾ ಕಬಡ್ಡಿ 2023 ಹಾಗೂ ಸಾಂಸ್ಕೃತಿಕ ಕಲಾ ವೈಭವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಽಕಾರಿ ಡಾ ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆ ಮಾಡಿದರು.
ಬೆಳ್ಳಿಹಬ್ಬ ಸಮಿತಿಯ ಅಧ್ಯಕ್ಷ ರಾಜಶೇಖರ್ ರೈ ಇರಾಗುತ್ತು, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ಸಂಪಿಲ, ಉಪಾಧ್ಯಕ್ಷ ಮೊಯ್ದೀನ್ ಸಮೀರ್ ಇರಾ, ರಾಷ್ಟ್ರೀಯ ಕಬಡ್ಡಿ ತೀರ್ಪುಗಾರರಾದ ಶೀತಲ್ ಪಡಿವಾಲ್, ಸದಸ್ಯ ಸಂಪತ್ ಉಪಸ್ಥಿತರಿದ್ದರು. ಫೆ.11ರಂದು ಬೆಳಗ್ಗೆ 10 ಗಂಟೆಯಿಂದ ಕಬಡ್ಡಿ ಪಂದ್ಯಾಟ ಆರಂಭವಾಗಲಿದೆ. ಸಂಜೆ ೭ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಫೆ. 12ರಂದು ಬೆಳಗ್ಗೆ 10ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭವಾಗಲಿದ್ದು, ರಾತ್ರಿಯವರೆಗೆ ವಿವಿಧ ವಿನೋಧಾವಳಿಗಳು ನಡೆಯಲಿದೆ. ಎರಡೂ ದಿನದ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದಾರೆ.
Be the first to comment on "ಇರಾ ಕಬಡ್ಡಿ, ಸಾಂಸ್ಕೃತಿಕ ಕಲಾವೈಭವ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಡಾ. ಹೆಗ್ಗಡೆ"