ವಿಟ್ಲ

ಮಾಣಿ ಪೆರಾಜೆ ಶ್ರೀ ರಾಮಚಂದ್ರಾಪುರ ಮಠದಲ್ಲಿ ಬ್ರಹ್ಮಕಲಶೋತ್ಸವ ಸಂಪನ್ನ

ಜಾಹೀರಾತು

ಬಂಟ್ವಾಳ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಪೆರಾಜೆ ಮಾಣಿಯಲ್ಲಿರುವ ಶ್ರೀ ರಾಮಚಂದ್ರಾಪುರ ಮಠದಲ್ಲಿ ನೂತನ ಶಿಲಾಮಯ ಗರ್ಭಾಗಾರದಲ್ಲಿ ಸಪರಿವಾರ ಶ್ರೀರಾಮದೇವರ ಪ್ರತಿಷ್ಠಾಪನೆಯ ಬ್ರಹ್ಮಕಲಶೋತ್ಸವವನ್ನು ಬುಧವಾರ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ನೆರವೇರಿಸಿದರು.

ಗೋಕರ್ಣದ ತಂತ್ರಿಗಳಾದ ಅಮೃತೇಶ ಭಟ್ ಹಿರೇ ಹಾಗೂ ಶ್ರೀಮಠದ ಧರ್ಮಕರ್ಮ ವಿಭಾಗದ ಕೇಶವ ಪ್ರಸಾದ್ ಕೂಟೇಲು ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದವು. ವೇದಘೋಷ, ಭಕ್ತರ ಜೈಕಾರಗಳ ನಡುವೆ 10 ಗಂಟೆಗೆ ಶ್ರೀ ರಾಘವೇಶ್ವರ ಸ್ವಾಮೀಜಿ ಬ್ರಹ್ಮಕಲಶ ನೆರವೇರಿಸಿದರು.

ಜತೆಗೆ ಮೂಲಮಂತ್ರ ಹವನ, ಗಣಪತಿ ಅಥರ್ವಶೀರ್ಷ ಹವನ, ಶ್ರೀ ರುದ್ರಹವನ, ಪರಿವಾರ ದೇವರುಗಳಿಗೆ ನವಕಾಭಿಷೇಕ ಜರುಗಿತು. ಬಳಿಕ ಮಾಣಿಮಠ ಮಹಾಸಮಿತಿ ಅಧ್ಯಕ್ಷ ಹಾರಕೆರೆ ನಾರಾಯಣ ಭಟ್ ಅವರು ಗರ್ಭಾಗಾರದ ಶಿಖರದಲ್ಲಿ ರಜತ ಕಲಶಾಭಿಷೇಕ ನೆರವೇರಿಸಿದರು. ಮಧ್ಯಾಹ್ನ ಬ್ರಹ್ಮಕಲಶದ ಬಳಿಕ ನಿಯನೈಮಿತ್ತಿಕ ನಿರ್ಣಯ, ಪ್ರಾರ್ಥನೆ, ಪ್ರಸಾದ ವಿತರಣೆ, ಸಂಜೆ ಆಶ್ಲೇಷ ಬಲಿ ಸೇವೆ ನಡೆಯಿತು. ಮಹಾಸಮಿತಿ ಪದಾಧಿಕಾರಿಗಳಾದ ಹಾರಕೆರೆ ನಾರಾಯಣ ಭಟ್, ಜನಾರ್ದನ ಭಟ್ ಬಂಗಾರಡ್ಕ, ಮೈಕೆ ಗಣೇಶ್ ಭಟ್, ಮಂಡಲ ಗುರಿಕ್ಕಾರರಾದ ಉದಯಕುಮಾರ್ ಖಂಡಿಗ, ವಾಸ್ತು ತಜ್ಞ ಮಹೇಶ್ ಮುನಿಯಂಗಳ ಮತ್ತಿತರರು ಪಾಲ್ಗೊಂಡಿದ್ದರು. ಗುರುವಾರ ಶ್ರೀದೇವರ ಮಂಗಲೋತ್ಸವ, ಅವಶಿಷ್ಟಹವನ, ಮಹಾಪೂರ್ಣಾಹುತಿ, ಶ್ರೀ ಲಕ್ಷ್ಮೀನಾರಾಯಣ ಹೃದಯ ಹವನ, ವೈದಿಕ ಮಂತ್ರಾಕ್ಷತೆ ಮತ್ತು ಪ್ರಸಾದ ವಿತರಣೆ ನಡೆಯಲಿದೆ.

 

odiyoor

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.