ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮಾಜಸೇವಕ, ಉದ್ಯಮಿ, ಹಾಗೂ ಬಿಲ್ಲವ ಮುಖಂಡ ಬಂಟ್ವಾಳ ತಾಲೂಕಿನ ಪಚ್ಚಿನಡ್ಕದ ಕೆ.ಸೇಸಪ್ಪ ಕೋಟ್ಯಾನ್ (75) ಗುರುವಾರ (ಜ.26) ನಿಧನ ಹೊಂದಿದ್ದಾರೆ. ಪತ್ನಿ, ಪುತ್ರ ಉದ್ಯಮಿ ಭುವನೇಶ್ ಪಚ್ಚಿನಡ್ಕ, ಹಾಗು ನಾಲ್ಕು ಹೆಣ್ಣುಮಕ್ಕಳನ್ನು ಅವರು ಅಗಲಿದ್ದಾರೆ. ಮೃತದೇಹವನ್ನು ಜ.27ರಂದು ಬೆಳಗ್ಗೆ 9ರಿಂದ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಮೃತರ ಸ್ವಗೃಹ ಪಚ್ಚಿನಡ್ಕದ ಶುಭ ನಿಲಯದಲ್ಲಿ ಇಡಲಾಗುತ್ತಿದ್ದು, ಮಧ್ಯಾಹ್ನ 12.30ಕ್ಕೆ ಅಂತ್ಯಕ್ರಿಯೆ ನಡೆಯಲಿದೆ.
ಶುಭ ಬೀಡಿಗಳು ಹೆಸರಿನಲ್ಲಿ ಬೀಡಿ ಉದ್ಯಮವನ್ನು ಆರಂಭಿಸಿ ಸಹಸ್ರಾರು ಮಂದಿಗೆ ಉದ್ಯೋಗದಾತರಾದ ಕೋಟ್ಯಾನ್, ಶುಭಲಕ್ಷ್ಮೀ ಟ್ರಾವೆಲ್ಸ್ ಮೂಲಕ ಬಸ್ ಉದ್ಯಮವನ್ನೂ ಆರಂಭಿಸಿ, ಹಳ್ಳಿಪ್ರದೇಶದ ಜನರಿಗೆ ನೆರವಾದವರು. ಕೊಡುಗೈ ದಾನಿಯಾಗಿದ್ದ ಅವರು,ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದರು. ಸತತ 26 ವರ್ಷಗಳಿಂದ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿದ್ದರು. ಶ್ರೀ ಅನ್ನಪೂರ್ಣೇಶ್ವರಿ ದೇವಿ ದೇವಸ್ಥಾನದ ಸಮಿತಿ ಅಧ್ಯಕ್ಷರಾಗಿ ವಿವಿಧ ಸಂಘ, ಸಂಸ್ಥೆಗಳ ಗೌರವಾಧ್ಯಕ್ಷರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಸಮಾಜಸೇವೆಗೆ ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ದೊರಕಿತ್ತು. ಅವರ ನಿಧನಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಸಂತಾಪ ಸೂಚಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…