ಜನವರಿ 30 ಮತ್ತು 31ರಂದು ಒಡಿಯೂರು ಕ್ಷೇತ್ರದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ, ಒಡಿಯೂರು ರಥೋತ್ಸವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರಕ್ಕೆ ಹಸಿರುವಾಣಿ ಹೊರೆಕಾಣಿಕೆ ಆಗಮಿಸಿತು. ಎಲ್ಲ ಭಾಗಗಳಿಂದ ಬಂದ ವಾಹನಗಳು ಕನ್ಯಾನದಲ್ಲಿ ಸೇರಿ ಮೆರವಣಿಗೆ ಮೂಲಕ ಕ್ಷೇತ್ರಕ್ಕೆ ಆಗಮಿಸಿತು.
ಈ ಸಂದರ್ಭ ಸ್ವಾಗತಿಸಿ, ಆಶೀರ್ವಚನ ನೀಡಿದ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿ, ಉಗ್ರಾಣದಲ್ಲಿ ದೀಪ ಬೆಳಗಿಸಿ ಶುಭ ಹಾರೈಸಿದರು. ಸಾಧ್ವಿ ಮಾತನಾನಂದಮಯಿ, ಉದ್ಯಮಿ ವಾಮಯ್ಯ ಶೆಟ್ಟಿ ಚೆಂಬೂರು, ರೇವತಿ ವಾಮಯ್ಯ ಶೆಟ್ಟಿ, ಒಡಿಯೂರು ಶ್ರೀ ವಿವಿಧೋದ್ದೇಶ ಸಹಕಾರಿ ಅಧ್ಯಕ್ಷ ಸುರೇಶ್ ರೈ, ಒಡಿಯೂರು ಶ್ರೀಗ್ರಾಮವಿಕಾಸ ಯೋಜನೆಯ ಕಿರಣ್ ಕುಮಾರ್ ಊರ್ವ, ಪ್ರಮುಖರಾದ ಲಿಂಗಪ್ಪ ಗೌಡ, ಸರ್ವಾಣಿ ಪಿ.ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಅಶೋಕ್ ಕುಮಾರ್, ಸೇರಾಜೆ ಗಣಪತಿ ಭಟ್, ಯಶವಂತ ವಿಟ್ಲ, ಮಧುಕಿರಣ್, ರಾಧಾಕೃಷ್ಣ ಪಕ್ಕಳ ಮತ್ತಿತರರು ಉಪಸ್ಥಿತರಿದ್ದರು.
| ಸಾಹಿತ್ಯದಿಂದ ಸಾಮರಸ್ಯ ಆಶಯ | ಎರಡು ದಿನ ವಿಚಾರ ಮಂಡನೆ, ಸಾಂಸ್ಕೃತಿಕ ಕಾರ್ಯಕ್ರಮ (more…)