ತುಳು ಭಾಷೆ ಸಂಸ್ಕೃತಿಯ ಕುರಿತು ಮತ್ತೆ ಮತ್ತೆ ನೆನಪಿಸುವುದರ ಜೊತೆಗೆ ಸ್ಥಾನಮಾನಗಳ ಮೇಲ್ಮೈಯ ಅರಿವು ಮೂಡಿಸುವ ಕಾರ್ಯವನ್ನು ಸಾಹಿತ್ಯ ಸಮ್ಮೇಳನದ ಮೂಲಕ ಮಾಡಲಾಗುತ್ತಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಸೋಮವಾರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ರಾಜಾಂಗಣದಲ್ಲಿ ಶ್ರೀ ಒಡಿಯೂರು ರಥೋತ್ಸವದ ಅಂಗವಾಗಿ ನಡೆದ 23ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದರು.
ರಾಸಾಯನಿಕಗಳನ್ನು ಮಣ್ಣಿಗೆ ಸೇರಿಸಿ ಮಣ್ಣಿನ ಸಾರ ಕಡಿಮೆ ಮಾಡುವ ಜತೆಗೆ ಆಹಾರ ವಿಷವಾಗಿದೆ. ಭಾಷೆ – ಸಂಸ್ಕೃತಿ ಒಂದು ನಾಣ್ಯದ ಎರಡು ಮುಖಗಳಾಗಿದ್ದು, ಹಿಂದಿನ ಆಚಾರ ವಿಚಾರಗಳನ್ನು ಉಳಿಸುವ ನಿಟ್ಟಿನಲ್ಲಿ ಯುವ ಶಕ್ತಿ ಪ್ರಯತ್ನಿಸಬೇಕು ಎಂದರು.
ಸಮ್ಮೇಳನಾಧ್ಯಕ್ಷ ಹಿರಿಯ ಸಾಹಿತಿ ಡಾ. ವಸಂತ ಕುಮಾರ ಪೆರ್ಲ ಮಾತನಾಡಿ, ಪಶ್ಚಿಮವಾಹಿನಿ ಯೋಜನೆ ಸಂಪೂರ್ಣವಾಗಿ ಅನುಷ್ಠಾನಕ್ಕೆ ಬರಬೇಕು, ಮಂಗಳೂರಿಗೆ ವೃತ್ತಮಾರ್ಗ ಆಗಬೇಕು, ನೇತ್ರಾವತಿ ನದಿಗೆ ಅಡ್ಯಾರು ಕೊಣಾಜೆ ಸಂಪರ್ಕ ಸೇತುವೆ ಆಗಬೇಕು, ಗುಂಡ್ಯದಿಂದ ಸಕಲೇಶಪುರದವರೆಗೆ 23 ಕಿ.ಮೀ. ಉದ್ದದ ಪ್ರಸ್ತಾವಿತ ಸುರಂಗ ಮಾರ್ಗ ಅನುಷ್ಠಾನವಾದರೆ, ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟ ಅಭಿವೃದ್ಧಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಸಾದ್ವಿ ಮಾತಾನಂದಮಯೀ ದಿವ್ಯ ಸಾನಿಧ್ಯ ವಹಿಸಿದ್ದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಬೇಲಾಡಿ ವಿಠಲ ಶೆಟ್ಟಿ ಅವರು ಒಡಿಯೂರು ಶ್ರೀಗಳು ತುಳುಲಿಪಿಯ ಕೈಬರಹದ ಈಶಾವಾಸ್ಯೋಪನಿಷತ್ ಬಿಡುಗಡೆಮಾಡಿದರು.
ಅಖಿಲ ಭಾರತ ತುಳು ಕೂಟದ ಅಧ್ಯಕ್ಷ ಎ. ಸಿ. ಭಂಡಾರಿ, ಬೆಂಗಳೂರು ತುಳುವರ ಚಾವಡಿ ಗೌರವಾಧ್ಯಕ್ಷ ಪುರುಷೋತ್ತಮ ಚೇಂಡ್ಲ, ದ. ಕ. ಜಿಲ್ಲಾ ಕ್ಯಾಟರಿಂಗ್ ಎಸೋಸಿಯೇಶನ್ ಅಧ್ಯಕ್ಷ ರಾಜ್ ಗೋಪಾಲ ರೈ, ಪೂರ್ಣಿಮಾ ಉಪಸ್ಥಿತರಿದ್ದರು.
ರೇಣುಕಾ ಎಸ್. ರೈ ಒಡಿಯೂರು ಪ್ರಾರ್ಥಿಸಿದರು. ಒಡಿಯೂರು ತುಳು ಕೂಡದ ಅಧ್ಯಕ್ಷ ಯಶವಂತ ವಿಟ್ಲ ಸ್ವಾಗತಿಸಿದರು. ಜಯಪ್ರಕಾಶ್ ಶೆಟ್ಟಿ ಎ. ಅಧ್ಯಕ್ಷರ ಪರಿಚಯ ಮಾಡಿದರು. ದೇವಿಪ್ರಸಾದ್ ಶೆಟ್ಟಿ ಬೆಜ್ಜ ವಂದಿಸಿದರು. ಲೋಕೇಶ್ ಶೆಟ್ಟಿ ಬಾಕ್ರಬೈಲು ಕಾರ್ಯಕ್ರಮ ನಿರೂಪಿಸಿದರು.
Be the first to comment on "ಒಡಿಯೂರು ಕ್ಷೇತ್ರದಲ್ಲಿ ತುಳುನಾಡ ಜಾತ್ರೆ, ತುಳು ಸಾಹಿತ್ಯ ಸಮ್ಮೇಳನ ಆರಂಭ"