ವಿಟ್ಲ

ಒಡಿಯೂರು ತುಳು ಸಾಹಿತ್ಯ ಸಮ್ಮೇಳನದಲ್ಲಿ ಐವರು ಸಾಧಕರಿಗೆ ತುಳುಸಿರಿ ಮಾನಾದಿಗೆ

PHOTO COURTESY: click point modeling studio, Kanyana,

ಒಡಿಯೂರಿನಲ್ಲಿ ನಡೆದ ತುಳುನಾಡ ಜಾತ್ರೆ-ಶ್ರೀ ಒಡಿಯೂರು ರಥೋತ್ಸವ ಹಿನ್ನೆಲೆಯಲ್ಲಿ ನಡೆದ ತುಳು ಸಾಹಿತ್ಯ ಸಮ್ಮೇಳನದಲ್ಲಿ ಮಂಗಳವಾರ ಐವರು ಸಾಧಕರಿಗೆ ತುಳು ಸಿರಿ ಮಾನಾದಿಗೆ (ಸನ್ಮಾನ) ಗೌರವಾರ್ಪಣೆ ಮಾಡಲಾಯಿತು. ಶ್ರೀ ಗುರುದೇವಾನಂದ ಸ್ವಾಮೀಜಿ, ಸಾಧ್ವಿ ಶ್ರೀ ಮಾತಾನಂದಮಯೀ, ಹಿರಿಯ ಸಾಹಿತಿ ಸಮ್ಮೇಳನಾಧ್ಯಕ್ಷ ಡಾ. ವಸಂತ ಕುಮಾರ ಪೆರ್ಲ, ಉದ್ಯಮಿಗಳಾದ ಸದಾಶಿವ ಶೆಟ್ಟಿ ಕುಳೂರು, ವಾಮಯ್ಯ ಬಿ.ಶೆಟ್ಟಿ, ದಯಾನಂದ ಹೆಗ್ಡೆ, ಒಡಿಯೂರು ಸೌಹಾರ್ದ ಸಹಕಾರಿ ಅಧ್ಯಕ್ಷ ಸುರೇಶ್ ರೈ ಹಾಗೂ ಸಂಜೀವಿನಿ ಆಸ್ಪತ್ರೆ ಮುಂಬೈನ ಆಡಳಿತ ನಿರ್ದೇಶಕ ಡಾ. ಸುರೇಶ್ ರಾವ್ ಸಹಿತ ಗಣ್ಯರ ಸಮಕ್ಷಮ ಹಿರಿಯ ಮೃದಂಗವಾದಕ ಶತಾಯುಷಿ ವಿದ್ವಾನ್ ಬಾಬು ರೈ, ಸಾಹಿತಿ ಸಂಶೋಧಕಿ ಡಾ. ಸಾಯಿಗೀತಾ ತೋಕೂರುಗುತ್ತು, ಸಹಕಾರಿ ಎಸ್.ಬಿ.ಜಯರಾಮ ರೈ, ತುಳು ವಸ್ತು ಸಂಗ್ರಾಹಕ ಸುಧಾಕರ ಶೆಟ್ಟಿ ಹಿರ್ಗಾನ, ಸಾವಯವ ಕೃಷಿಕ ರಾಮಣ್ಣ ಗೌಡ ಅವರನ್ನು ಗೌರವಿಸಲಾಯಿತು. ಯಶವಂತ ವಿಟ್ಲ ಕಾರ್ಯಕ್ರಮ ನಿರ್ವಹಿಸಿದರು.  PHOTO COURTESY: click point modeling studio, Kanyana,

odiyoor

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ