ಸ್ಕಿಲ್ ಇಂಡಿಯಾ ಸದುಪಯೋಗ: ಕಲ್ಲಡ್ಕದಲ್ಲಿ ವಿದ್ಯಾರ್ಥಿಗಳಿಗೆ ಗೋವಾ ಸಿಎಂ ಸಾವಂತ್ ಸಲಹೆ

ಬಂಟ್ವಾಳ: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ದೂರದೃಷ್ಟಿಯ ಯೋಜನೆಯಾದ ಸ್ಕಿಲ್ ಇಂಡಿಯಾ ಮೂಲಕ ನವಪೀಳಿಗೆಗೆ ವೃತ್ತಿಸಂಬಂಧ ಕೋರ್ಸ್ ಗಳನ್ನು ಮಾಡಲು ಪ್ರೇರೇಪಣೆ ನೀಡಲಾಗುತ್ತಿದೆ. ಇದರ ಸದುಪಯೋಗ ಪಡೆಯಿರಿ ಎಂದು ವಿದ್ಯಾರ್ಥಿಗಳಿಗೆ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಸಲಹೆ ನೀಡಿದರು.

ಜಾಹೀರಾತು

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಬುಧವಾರ ಭೇಟಿ ನೀಡಿದ ಅವರು ಕೇಂದ್ರದ ಸ್ಥಾಪಕ ಹಾಗೂ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರ ಚಿಂತನೆಗಳ ಮೂಲಕ ಸಂಸ್ಕಾರಯುತವಾದ ಶಿಕ್ಷಣ ವ್ಯವಸ್ಥೆಯನ್ನು ನೀಡಲಾಗುತ್ತಿದೆ ಎಂದು ಶ್ಲಾಘಿಸಿದರು.

ಶೈಕ್ಷಣಿಕವಾಗಿಯಷ್ಟೇ ಅಲ್ಲ, ಸಂಸ್ಕಾರಯುತವಾಗಿ ಬೆಳೆಯಲು ಹಾಗೂ ರಾಷ್ಟ್ರೀಯ ವಿಚಾರಧಾರೆಯುಳ್ಳ ನಾಗರಿಕರಾಗಿ ರೂಪುಗೊಳ್ಳಲು ನವಭಾರತ ನಿರ್ಮಾಣಕ್ಕೆ ವಿದ್ಯಾರ್ಥಿಗಳನ್ನು ತಯಾರು ಮಾಡುವ ಕಾರ್ಯ ಇಂದು ಆಗಬೇಕಾಗಿದೆ ಎಂದರು.

ಇದಕ್ಕೂ ಮೊದಲು ವಿದ್ಯಾಕೇಂದ್ರದ ವಿವಿಧ ಚಟುವಟಿಕೆಗಳನ್ನು ಗಮನಿಸಿದ ಡಾ. ಸಾವಂತ್, ಬಳಿಕ ಪಿಯು ವಿದ್ಯಾರ್ಥಿಗಳ ದೀಪಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಂಗಳೂರು ದಕ್ಷಿಣ ಶಾಸಕ ಬಿ. ವೇದವ್ಯಾಸ ಕಾಮತ್, ಪ್ರಸಾದ್ ನೇತ್ರಾಲಯದ ನಿರ್ದೇಶಕ ಡಾ.ಕೃಷ್ಣಪ್ರಸಾದ್ ಕೂಡ್ಲು, ಹಂಪಿ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಎಸ್.ಸಿ‌‌.ರಮೇಶ್, ಉದ್ಯಮಿಗಳಾದ ಬಾಲಕೃಷ್ಣ ಭಂಡಾರಿ, ನವೀನ್ ಹೆಗ್ಡೆ ಮುಂಬೈ, ಶ್ರೀರಾಮ ವಿದ್ಯಾಕೇಂದ್ರದ ಅದ್ಯಕ್ಷ ನಾರಾಯಣ ಸೋಮಯಾಜಿ ಸಂಚಾಲಕ ವಸಂತ ಮಾಧವ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪ್ರಿಯಾಂಕಾ ಸ್ವಾಗತಿಸಿದರು. ವೆಂಕಟೇಶ್ ವಂದಿಸಿದರು. ಸ್ವಾತಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸ್ಕಿಲ್ ಇಂಡಿಯಾ ಸದುಪಯೋಗ: ಕಲ್ಲಡ್ಕದಲ್ಲಿ ವಿದ್ಯಾರ್ಥಿಗಳಿಗೆ ಗೋವಾ ಸಿಎಂ ಸಾವಂತ್ ಸಲಹೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*