ಬಂಟ್ವಾಳ

ಜೋಡುಮಾರ್ಗ ಜೇಸಿ ಘಟಕ ಪದಗ್ರಹಣ ಕಾರ್ಯಕ್ರಮ

ಜಾಹೀರಾತು

ಬಂಟ್ವಾಳ: ಇಲ್ಲಿನ ರೋಟರಿ ಕ್ಲಬ್ ಸಭಾಂಗಣದಲ್ಲಿ ಜೋಡುಮಾರ್ಗ ನೇತ್ರಾವತಿ ಜೇಸಿಯ ನೂತನ ಸದಸ್ಯರ ಪದಗ್ರಹಣ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜೇಸಿ ಅಧ್ಯಕ್ಷ ಹರಿಪ್ರಸಾದ್ ಕುಲಾಲ್ ಅವರು ನೂತನ ಅಧ್ಯಕ್ಷೆ ಗಾಯತ್ರಿ ಲೋಕೇಶ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಕಾರ್ಯದರ್ಶಿ ಕಿಶನ್ ಎನ್. ರಾವ್ ಅವರು ನೂತನ ಕಾರ್ಯದರ್ಶಿ ರಮ್ಯಾ ಬಿ.ಎಸ್. ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಕಾರ್ಯಕ್ರಮವನ್ನು ಮಾವಂತೂರು ಶ್ರೀ ಮಹಾಗಣಪತಿ ದೇವಸ್ಥಾನದ ಅಧ್ಯಕ್ಷ ಪದ್ಮರಾಜ ಬಲ್ಲಾಳ್ ಮಾವಂತೂರು ಉದ್ಘಾಟಿಸಿ, ಶುಭ ಹಾರೈಸಿದರು.  ಈ ಸಂದರ್ಭ ಜೇಸಿ ವಲಯ 15ರ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಜೇಸಿ ಆಂದೋಲನದಲ್ಲಿ ಯುವಜನರು ಭಾಗವಹಿಸಿ ವ್ಯಕ್ತಿತ್ವ ವಿಕಸನದ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬಾಳಬಹುದು ಎಂದರು.

ವಿವಿಧ ಪದಾಧಿಕಾರಿಗಳಾದ ಸುಬ್ರಹ್ಮಣ್ಯ ಪೈ, ಕಿಶನ್ ಎನ್.ರಾವ್, ಡಾ. ವಿನಾಯಕ ಕೆ.ಎಸ್, ಅಮಿತಾ ಹರ್ಷರಾಜ್, ಪ್ರಕಾಶ್ ಆಳ್ವ, ರಮ್ಯಾ ಬಿ.ಎಸ್, ರೇಖಾ ರಾವ್, ದೀಪ್ತಿ ಶ್ರೀನಿಧಿ ಭಟ್, ರಶ್ಮಿತಾ, ಸೌಮ್ಯಾ ಎ, ಶ್ರೀನಿಧಿ ಭಟ್, ಧೀರಜ್ ಹೆಬ್ರಿ, ಹರ್ಷರಾಜ್, ಹರಿಶ್ಚಂದ್ರ ಆಳ್ವ, ರವೀಂದ್ರ ಕುಕ್ಕಾಜೆ ಅವರಿಗೆ ಪ್ರಮಾಣವಚನ ಬೋಧಿಸಲಾಯಿತು. ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮ ಈ ಸಂದರ್ಭ ನಡೆಯಿತು. ನೂತನ ಅಧ್ಯಕ್ಷೆ ಗಾಯತ್ರಿ ಲೋಕೇಶ್ ಅಧ್ಯಕ್ಷತೆ ವಹಿಸಿದ್ದರು. ನೂತನ ಕಾರ್ಯದರ್ಶಿ ರಮ್ಯಾ ಬಿ.ಎಸ್. ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts