ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸುತ್ತಿರುವ ಬಜೆಟ್ ನ ಈವರೆಗಿನ ಮುಖ್ಯಾಂಶಗಳು ಇಲ್ಲಿವೆ.
- ರೈತರಿಗೆ 5 ಲಕ್ಷ ರೂ. ಬಡ್ಡಿ ರಹಿತ ಸಾಲ
- 30 ಲಕ್ಷಕ್ಕೂ ಹೆಚ್ಚು ರೈತರಿಗೆ 25 ಸಾವಿರ ಕೋಟಿ ರೂ. ಸಾಲ
- ಬೆಂಗಳೂರಿನ ಅಭಿವೃದ್ಧಿಗೆ 10 ಸಾವಿರ ಕೋಟಿ. ರೂ.
- ರೈತರಿಗಾಗಿ ‘ಭೂ ಸಿರಿ’ ನೂತನ ಯೋಜನೆ ಘೋಷಣೆ: ಯೋಜನೆಯಡಿ 10 ಸಾವಿರ ರೂ. ಹೆಚ್ಚುವರಿ ಸಹಾಯಧನ
- ‘ರೈತ ಸಿರಿ’ ಯೋಜನೆ ಅಡಿ ಕಿರುಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10 ಸಾವಿರ ರೂ. ಪ್ರೋತ್ಸಾಹ ಧನ
- ‘ಸಹಸ್ರ ಸರೋವರ’ ಯೋಜನೆ ಅಡಿ ರಾಜ್ಯದ 1,000 ಸಣ್ಣ ಸರೋವರಗಳ ಅಭಿವೃದ್ದಿ
- ‘ಸಹ್ಯಾದ್ರಿ ಸಿರಿ’ ಯೋಜನೆ ಅಡಿ ಕರಾವಳಿ, ಮಲೆನಾಡು ಹಾಗೂ ಅರೆ ಮಲೆನಾಡಿನಲ್ಲಿ ಬೇಸಿಗೆಯಲ್ಲಿ ನೀರು ಸಂರಕ್ಷಣೆಗೆ ಯೋಜನೆ
- ತೋಟಗಾರಿಕೆ ಉತ್ಪಾದಕತೆ ಹೆಚ್ಚಿಸಲು ‘ಒಂದು ತೋಟ ಒಂದು ಬೆಳೆ’ ಯೋಜನೆಗೆ 10 ಕೋಟಿ ರೂ.
- ಆಳ ಸಮುದ್ರ ಮೀನುಗಾರಿಕೆ ಉತ್ತೇಜನಕ್ಕೆ ‘ಮತ್ಸ್ಯ ಸಿರಿ’ ಯೋಜನೆ
- ‘ಮುಖ್ಯಮಂತ್ರಿ ವಿದ್ಯಾ ಶಕ್ತಿ’ ಯೋಜನೆಯಡಿ ಪದವಿವರೆಗೂ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಶಿಕ್ಷಣ
(ಮುಂದುವರಿಯುವುದು)
Be the first to comment on "ರೈತರಿಗೆ ಬಂಪರ್ ಗಿಫ್ಟ್: ಸಿಎಂ ಬೊಮ್ಮಾಯಿ ಬಜೆಟ್ ನಲ್ಲಿ ಈವರೆಗೆ ಏನೇನಿದೆ?"