ಬಂಟ್ವಾಳ: ಬಂಟ್ವಾಳ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆಯನ್ನು ನಡೆಸಲಾಯಿತು.
ಚುನಾವಣೆ ಶಾಖೆಯ ವಿಷಯ ನಿರ್ವಾಹಕ ನಾರಾಯಣ ಗೌಡ ದೀಪ ಬೆಳಗಿಸಿ ಮಾತನಾಡಿ, ಛತ್ರಪತಿ ಎಂದ ತಕ್ಷಣ ನೆನಪಾಗುವುದು ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಶಿವಾಜಿ ಮಹಾರಾಜರು. ತನ್ನ ತಾಯಿ ಮತ್ತು ಗುರುಗಳ ಪ್ರೇರಣೆಯಿಂದ ಸಮರ್ಥರಾಗಿ ಬೆಳೆದ ಶಿವಾಜಿ ಪ್ರಸಕ್ತ ಕಾಲಕ್ಕೆ ಮಾದರಿಯಾಗಿ ನಿಲ್ಲುತ್ತಾರೆ. ಅವರ ದೇಶ ಪ್ರೇಮ ಅನುಕರಣೀಯವಾದುದು ಎಂದು ಹೇಳಿದರು. ಈ ಸಂದರ್ಭ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿ, ಗ್ರಾಮ ಆಡಳಿತ ಆಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.ಕಂದಾಯ ನಿರೀಕ್ಷಕರಾದ ಜನಾರ್ದನ್.ಜೆ ಸ್ವಾಗತಿಸಿ ವಂದಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಂಟ್ವಾಳದಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಆಚರಣೆ"
Be the first to comment on "ಬಂಟ್ವಾಳದಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಆಚರಣೆ"