ಬಂಟ್ವಾಳ

ಬಂಟ್ವಾಳದಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಆಚರಣೆ

ಜಾಹೀರಾತು

ಬಂಟ್ವಾಳ: ಬಂಟ್ವಾಳ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆಯನ್ನು ನಡೆಸಲಾಯಿತು.

ಚುನಾವಣೆ ಶಾಖೆಯ ವಿಷಯ ನಿರ್ವಾಹಕ ನಾರಾಯಣ ಗೌಡ ದೀಪ ಬೆಳಗಿಸಿ ಮಾತನಾಡಿ, ಛತ್ರಪತಿ ಎಂದ ತಕ್ಷಣ ನೆನಪಾಗುವುದು ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಶಿವಾಜಿ ಮಹಾರಾಜರು. ತನ್ನ  ತಾಯಿ ಮತ್ತು ಗುರುಗಳ ಪ್ರೇರಣೆಯಿಂದ ಸಮರ್ಥರಾಗಿ ಬೆಳೆದ ಶಿವಾಜಿ ಪ್ರಸಕ್ತ ಕಾಲಕ್ಕೆ ಮಾದರಿಯಾಗಿ ನಿಲ್ಲುತ್ತಾರೆ. ಅವರ ದೇಶ ಪ್ರೇಮ ಅನುಕರಣೀಯವಾದುದು ಎಂದು ಹೇಳಿದರು. ಈ ಸಂದರ್ಭ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿ, ಗ್ರಾಮ ಆಡಳಿತ ಆಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.ಕಂದಾಯ ನಿರೀಕ್ಷಕರಾದ ಜನಾರ್ದನ್.ಜೆ ಸ್ವಾಗತಿಸಿ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ