ಬಂಟ್ವಾಳ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ಜನತಾ ಪಕ್ಷ (ಕೆಜೆಪಿ) ಎಲ್ಲ ಕ್ಷೇತ್ರಗಳಲ್ಲೂ ಸ್ಪರ್ಧಿಸುವ ಗುರಿ ಹೊಂದಿದ್ದು, ಕನಿಷ್ಠ 50 ಸ್ಥಾನಗಳನ್ನು ಗೆಲ್ಲಲಿದೆ ಎಂದು ರಾಜ್ಯಾಧ್ಯಕ್ಷ ಪದ್ಮನಾಭ ಪ್ರಸನ್ನ ಕುಮಾರ್ ಹೇಳಿದ್ದಾರೆ.
ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ 110 ಕ್ಷೇತ್ರಗಳಲ್ಲಿ ಪಕ್ಷ ಸ್ಪರ್ಧಿಸಿತ್ತು. ಆದರೆ ಗೆಲ್ಲಲಾಗಿರಲಿಲ್ಲ. ಆದರೂ ಮತಗಳನ್ನು ಗಳಿಸಿದ್ದು, ಜನರ ವಿಶ್ವಾಸವನ್ನು ಗಳಿಸುತ್ತಿದ್ದೇವೆ ಎಂದ ಅವರು, ಮುಂದಿನ ತಿಂಗಳು ಹಲವು ಅಚ್ಚರಿಗಳು ಕಾದಿದ್ದು, ಪ್ರಮುಖ ನಾಯಕರು ಕೆಜೆಪಿಗೆ ಸಹಕಾರ ನೀಡಲಿದ್ದಾರೆ. ಆ ಮೂಲಕ ನಮ್ಮ ಪಕ್ಷ ಸರಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ದೊರೈರಾಜ್, ಪುಟ್ಟಸ್ವಾಮಿ ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…