ಬಂಟ್ವಾಳ

ಬಂಟ್ವಾಳ ಬ್ರಹ್ಮರಥೋತ್ಸವ: ಪಾರ್ಕಿಂಗ್ ಗೆ ಪ್ರತ್ಯೇಕ ವ್ಯವಸ್ಥೆ

ಬಂಟ್ವಾಳದ ಶ್ರೀ ತಿರುಮಲ ವೆಂಕಟ್ರಮಣ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮಗಳು ಫೆ.22 ರಿಂದ ಫೆ. 27 ರವರೆಗೆ ಜರುಗಲಿದ್ದು ಭಕ್ತರಿಗೆ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.

  • ಮಂಗಳೂರು, ಪುತ್ತೂರು, ಉಪ್ಪಿನಂಗಡಿ ಕಡೆಯಿಂದ ಬರುವವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ   ಹಿಂಬದಿಯ ಜಾಗದಲ್ಲಿ ಹಾಗೂ ದೇವಳದ  ಸಮೀಪ ಇರುವಎಸ್ ವಿ ಎಸ್ ದೇವಳದ ವಿದ್ಯಾ ಸಂಸ್ಥೆಯ ವಠಾರದಲ್ಲಿ ನಿಲ್ಲಿಸುವಂತೆ ವಿನಂತಿಸಲಾಗಿದೆ.
  • ಮೂಡುಬಿದಿರೆ, ಕಾರ್ಕಳ, ಕಡೆಯಿಂದ ಬರುವ ವಾಹನಗಳು ಬೈಪಾಸ್ ಜಂಕ್ಷನ್  ನಿಂದ ಬಂಟ್ವಾಳ ಪೇಟೆ ರಸ್ತೆಯಲ್ಲಿ ದೇವರಕಟ್ಟೆಯ ಬಸ್ ನಿಲ್ದಾಣದಲ್ಲಿ ವಾಹನವನ್ನು ನಿಲ್ಲಿಸುವಂತೆ ಕೋರಲಾಗಿದೆ.
  • ಪುಂಜಾಲ್ ಕಟ್ಟೆ,  ಗುರುವಾಯನಕೆರೆ,ಬೆಳ್ತಂಗಡಿ ಉಜಿರೆ ಕಡೆಯಿಂದ ಬರುವ ಭಕ್ತಾದಿಗಳು ಜಕ್ರಿಬೆಟ್ಟಿನಿಂದ   ಬಂಟ್ವಾಳ  ಪೇಟೆಯ ತ್ಯಾಗರಾಜ ರಸ್ತೆಯಲ್ಲಿ ಸರಸ್ವತಿ ನರ್ಸಿಂಗ್ ಹೋಂ ಇದರ ಎದುರುಗಡೆ ಇರುವ ವಿಶಾಲ ಮೈದಾನ ದಲ್ಲಿ ನಿಲ್ಲಿಸುವಂತೆ ವಿನಂತಿಸಿದೆ.

ಬ್ರಹ್ಮರಥೋತ್ಸವ ಸಂದರ್ಭ ಬಂಟ್ವಾಳ ಪೋಸ್ಟ್ ಆಫೀಸ್‌ನಿಂದ ಪೂರ್ಣಿಮಾ ಸ್ಟೋರ್ ವರೆಗೆ ರಸ್ತೆ  ಎರಡೂ ಬದಿಯಲ್ಲಿ ವಾಹನವನ್ನು ನಿಲ್ಲಿಸುವುದನ್ನು ನಿಷೇಧಿಸಲಾಗಿದೆ. ಹಾಗಾಗಿ ದೇವಳದ ಕಡೆಯಿಂದ ಸೂಚಿಸಿದ ಸ್ಥಳದಲ್ಲಿಯೇ ತಮ್ಮ  ವಾಹನವನ್ನು ನಿಲ್ಲಿಸಿ ಸಹಕರಿಸಬೇಕಾಗಿ ಆಡಳಿತ ಮಂಡಳಿ ವಿನಂತಿಸಿದೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ