ದ.ಕ.ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ ಆಯ್ಕೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ಪುತ್ತೂರಿನ ಪದ್ಮನಾಭ ಶೆಟ್ಟಿ ಆಯ್ಕೆಯಾಗಿದ್ದಾರೆ. ಬಂಟ್ವಾಳದಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಜಿಲ್ಲಾ ಯೋಜನಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಪ್ರಕ್ರಿಯೆ ನಡೆಯಿತು.

ಸ್ಥಾಪಕ ಅಧ್ಯಕ್ಷರಾದ ವಸಂತ ಸಾಲ್ಯಾನ್ ದೀಪ ಬೆಳಗಿಸಿ ಚಾಲನೆ ನೀಡಿದರು. ಜಿಲ್ಲಾಧ್ಯಕ್ಷರಾದ ಎನ್.ಎ ರಾಮಚಂದ್ರ. ನಿಕಟಪೂರ್ವ ಅಧ್ಯಕ್ಷರಾದ ಮಹಮ್ಮದ್  ಇಸ್ಮಾಯಿಲ್, ಸಾಜ  ರಾಧಾಕೃಷ್ಣ ಅಳ್ವ, ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್.  ಜಿಲ್ಲಾ ನಿರ್ದೇಶಕರಾದ ಸತೀಶ್ ಶೆಟ್ಟಿ ಮತ್ತು ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು. ಪ್ರಸ್ತುತ ವರ್ಷದಲ್ಲಿ  ಜನಜಾಗೃತಿ ಕಾರ್ಯಕ್ರಮಗಳ ಅನುಷ್ಠಾನದ ಕುರಿತು  ಚರ್ಚೆ ನಡೆಯಿತು. ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮಗಳ ವರದಿ ಪಡೆಯಲಾಯಿತು. ಬಳಿಕ ಜಿಲ್ಲಾ ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ಬೆಳ್ತಂಗಡಿಯ  ಶಾರದಾ ರೈ ಆಯ್ಕೆಯಾದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ದ.ಕ.ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ ಆಯ್ಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*