ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ಪುತ್ತೂರಿನ ಪದ್ಮನಾಭ ಶೆಟ್ಟಿ ಆಯ್ಕೆಯಾಗಿದ್ದಾರೆ. ಬಂಟ್ವಾಳದಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಜಿಲ್ಲಾ ಯೋಜನಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಪ್ರಕ್ರಿಯೆ ನಡೆಯಿತು.
ಸ್ಥಾಪಕ ಅಧ್ಯಕ್ಷರಾದ ವಸಂತ ಸಾಲ್ಯಾನ್ ದೀಪ ಬೆಳಗಿಸಿ ಚಾಲನೆ ನೀಡಿದರು. ಜಿಲ್ಲಾಧ್ಯಕ್ಷರಾದ ಎನ್.ಎ ರಾಮಚಂದ್ರ. ನಿಕಟಪೂರ್ವ ಅಧ್ಯಕ್ಷರಾದ ಮಹಮ್ಮದ್ ಇಸ್ಮಾಯಿಲ್, ಸಾಜ ರಾಧಾಕೃಷ್ಣ ಅಳ್ವ, ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್. ಜಿಲ್ಲಾ ನಿರ್ದೇಶಕರಾದ ಸತೀಶ್ ಶೆಟ್ಟಿ ಮತ್ತು ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು. ಪ್ರಸ್ತುತ ವರ್ಷದಲ್ಲಿ ಜನಜಾಗೃತಿ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ಚರ್ಚೆ ನಡೆಯಿತು. ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮಗಳ ವರದಿ ಪಡೆಯಲಾಯಿತು. ಬಳಿಕ ಜಿಲ್ಲಾ ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ಬೆಳ್ತಂಗಡಿಯ ಶಾರದಾ ರೈ ಆಯ್ಕೆಯಾದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…