ಬಂಟ್ವಾಳ

ಹೂವಿನಹಡಗಲಿಯ ಕರ್ನಾಟಕ ರಾಜ್ಯ ಬರಹಗಾರರ ಸಂಘ ಕೊಡಮಾಡುವ ರಾಜ್ಯ ಮಟ್ಟದ ಪತ್ರಕರ್ತ ಸೌರಭ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಆಯ್ಕೆ

ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಇವರು ಕೊಡಮಾಡುವ ರಾಜ್ಯ ಮಟ್ಟದ ಪತ್ರಕರ್ತ ಸೌರಭ ಪ್ರಶಸ್ತಿ 2023 ಪ್ರಶಸ್ತಿಗೆ ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಆಯ್ಕೆಯಾಗಿರುತ್ತಾರೆಂದು ಬರಹಗಾರರ ಸಂಘದ ರಾಜ್ಯಾಧ್ಯಕ್ಷ ಮಧು ನಾಯ್ಕ್ ಹೂವಿನಹಡಗಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಯಾನಂದ ಪೆರಾಜೆಯವರು 1986 ರಲ್ಲಿ ಸುದ್ದಿ ಬಿಡುಗಡೆ ವಾರ ಪತ್ರಿಕೆ ಬಂಟ್ವಾಳದಲ್ಲಿ ವರದಿಗಾರರಾಗಿ ಕಾರ್ಯಾರಂಭಿಸಿ ಬಳಿಕ ಹೊಸದಿಗಂತ, ಮುಂಗಾರು, ಸಂಯುಕ್ತಕರ್ನಾಟಕ ಕನ್ನಡ ಪ್ರಭ ದಿನಪತ್ರಿಕೆಗಳಲ್ಲಿ ಸುದೀರ್ಘ ಕಾಲ ಬಂಟ್ವಾಳ ತಾಲೂಕು ವರದಿಗಾರರಾಗಿ ಸೇವೆಸಲ್ಲಿಸಿದ್ದಾರೆ. ವಿವಿಧ ಪತ್ರಿಕೆಗಳಲ್ಲಿ ಅಂಕಣಕಾರರಾಗಿ, ಕವಿ, ಸಾಹಿತಿಯಾಗಿ ಲೇಖನಗಳನ್ನು ಪ್ರಕಟಿಸಿರುತ್ತಾರೆ. ಹೊಸದಿಗಂತಪತ್ರಿಕೆಯ ವರದಿಗಾರರಾಗಿ ಇರುವ ಇವರು ಪ್ರಸ್ತುತ ಮಧುಪ್ರಪಂಚ ತ್ರೈಮಾಸಿಕ ಪತ್ರಿಕೆಯ ಸಂಪಾದಕರಾಗಿರುತ್ತಾರೆ. ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಮತ್ತು ಬರಹಗಾರರ ವೇದಿಕೆಯ ಜಿಲ್ಲಾಧ್ಯಕ್ಷರಾಗಿರುತ್ತಾರೆ. ಫೆ.26ರಂದು ವಿಜಯಪುರದ ಹಂಪಿಯಲ್ಲಿ ನಡೆಯುವ ರಾಜ್ಯ ಸಮ್ಮೇಳನ ಮತ್ತು ಸಾವಿರ ಗೋಷ್ಠಿಯ ಸಂಭ್ರಮ ಕಾಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ವಿಜಯನಗರ ಜಿಲ್ಲಾ ಘಟಕದ ಸಹಯೋಗದೊಂದಿಗೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕಾರ ನಡೆಯಲಿದೆ

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts