ಕರ್ನಾಟಕ ಗಮಕ ಕಲಾ ಪರಿಷತ್ ನ ಬಂಟ್ವಾಳ ತಾಲೂಕು ಮತ್ತು ಜಿಲ್ಲಾ ಘಟಕದ ಆಶ್ರಯದಲ್ಲಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಮಾರ್ಚ್ 12ರಂದು ನಡೆಯಲಿದ್ದು, ಇದರ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಿ ದೇವಸ್ಥಾನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು.
ತಾಲೂಕು ದ್ವಿತೀಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ವಾರಿಜಾ ನಿರ್ಬೈಲು, ದ.ಕ.ಜಿಲ್ಲಾ ಗಮಕ ಕಲಾ ಪರಿಷತ್ತಿನ ಅಧ್ಯಕ್ಷ ಎ.ಸಿ.ಭಂಡಾರಿ, ತಾಲೂಕು ಘಟಕದ ಅಧ್ಯಕ್ಷ ಕೈಯೂರು ನಾರಾಯಣ ಭಟ್, ಸಂಚಾಲಕ ರಾಜಮಣಿ ರಾಮಕುಂಜ, ಪ್ರಧಾನ ಸಂಚಾಲಕ ಕೃಷ್ಣ ಶರ್ಮಾ ಅನಾರು, ಪ್ರಧಾನ ಕಾರ್ಯದರ್ಶಿ ರವೀಂದ್ರ ಕುಕ್ಕಾಜೆ, ಪ್ರಮುಖರಾದ ಸುಬ್ರಾಯ ಮಯ್ಯ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು. ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಸಮಾರಂಭ ನಡೆಯಲಿದ್ದು, ನಾನಾ ಗಣ್ಯರು ಭಾಗವಹಿಸುವರು. ಈ ಸಂದರ್ಭ ಗಮಕ ವಾಚನ, ರಸಪ್ರಶ್ನೆ, ರೂಪಕ, ರಸವಾಹಿನಿ, ಇರಲಿದ್ದು, ಶರಸೇತು ಬಂಧನ ಯಕ್ಷಗಾನ ತಾಳಮದ್ದಳೆಯೂ ಇರಲಿದೆ. ಸಂಜೆ ಸಮಾರೋಪ ಭಾಷಣವನ್ನು ಹಿರಿಯ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಮಾಡಲಿದ್ದಾರೆ ಎಂದು ಈ ಸಂದರ್ಭ ತಾಲೂಕು ಘಟಕಾಧ್ಯಕ್ಷ ಕೈಯೂರು ನಾರಾಯಣ ಭಟ್ ಹೇಳಿದ್ದಾರೆ.
Be the first to comment on "ಬಂಟ್ವಾಳ ತಾಲೂಕು ದ್ವಿತೀಯ ಗಮಕ ಸಮ್ಮೇಳನ: ಆಮಂತ್ರಣ ಪತ್ರಿಕೆ ಬಿಡುಗಡೆ"