ಬಂಟ್ವಾಳ

ಬಿ.ಸಿ.ರೋಡ್ ನಲ್ಲಿ ಬಂಟ್ವಾಳ ತಾಲೂಕು ದ್ವಿತೀಯ ಗಮಕ ಸಮ್ಮೇಳನ: ಆಮಂತ್ರಣ ಪತ್ರಿಕೆ ಬಿಡುಗಡೆ

ಜಾಹೀರಾತು

ಕರ್ನಾಟಕ ಗಮಕ ಕಲಾ ಪರಿಷತ್ ನ ಬಂಟ್ವಾಳ ತಾಲೂಕು ಮತ್ತು ಜಿಲ್ಲಾ ಘಟಕದ ಆಶ್ರಯದಲ್ಲಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಮಾರ್ಚ್ 12ರಂದು ನಡೆಯಲಿದ್ದು, ಇದರ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಿ ದೇವಸ್ಥಾನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು.

ತಾಲೂಕು ದ್ವಿತೀಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ವಾರಿಜಾ ನಿರ್ಬೈಲು, ದ.ಕ.ಜಿಲ್ಲಾ ಗಮಕ ಕಲಾ ಪರಿಷತ್ತಿನ ಅಧ್ಯಕ್ಷ ಮಧೂರು ಮೋಹನ ಕಲ್ಲೂರಾಯ,  ತಾಲೂಕು ಘಟಕದ ಅಧ್ಯಕ್ಷ ಕೈಯೂರು ನಾರಾಯಣ ಭಟ್, ಸಂಚಾಲಕ ರಾಜಮಣಿ ರಾಮಕುಂಜ, ಪ್ರಧಾನ ಸಂಚಾಲಕ ಕೃಷ್ಣ ಶರ್ಮಾ ಅನಾರು, ಪ್ರಧಾನ ಕಾರ್ಯದರ್ಶಿ ರವೀಂದ್ರ ಕುಕ್ಕಾಜೆ, ಪ್ರಮುಖರಾದ ಸುಬ್ರಾಯ ಮಯ್ಯ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು. ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಸಮಾರಂಭ ನಡೆಯಲಿದ್ದು, ನಾನಾ ಗಣ್ಯರು ಭಾಗವಹಿಸುವರು. ಈ ಸಂದರ್ಭ ಗಮಕ ವಾಚನ, ರಸಪ್ರಶ್ನೆ, ರೂಪಕ, ರಸವಾಹಿನಿ, ಇರಲಿದ್ದು, ಶರಸೇತು ಬಂಧನ ಯಕ್ಷಗಾನ ತಾಳಮದ್ದಳೆಯೂ ಇರಲಿದೆ. ಸಂಜೆ ಸಮಾರೋಪ ಭಾಷಣವನ್ನು ಹಿರಿಯ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಮಾಡಲಿದ್ದಾರೆ ಎಂದು ಈ ಸಂದರ್ಭ ತಾಲೂಕು ಘಟಕಾಧ್ಯಕ್ಷ ಕೈಯೂರು ನಾರಾಯಣ ಭಟ್ ಹೇಳಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts