ವಿಟ್ಲ

ಸ್ಕೌಟ್ ಹಾಗೂ ಗೈಡ್ ವಿದ್ಯಾರ್ಥಿಗಳಿಗೆ ತೃತೀಯ ಸೋಪಾನ ಪ್ರಶಸ್ತಿ ಪತ್ರ ಪ್ರದಾನ

ಬಂಟ್ವಾಳ: ಇತ್ತೀಚೆಗೆ ನಡೆದ, ಜಿಲ್ಲೆಯ ಸ್ಕೌಟ್ ವಿದ್ಯಾರ್ಥಿಗಳು ಹಾಗೂ  ಗೈಡ್ ವಿದ್ಯಾರ್ಥಿನಿಯರ ತೃತೀಯ ಸೋಪಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿ,ವಿದ್ಯಾರ್ಥಿನಿಯರಿಗೆ ಪ್ರಶಸ್ತಿ ಪ್ರದಾನ ಸಮಾರಂಭವು  ಮಾನ್ಯ ಜಿಲ್ಲಾಧಿಕಾರಿಯವರ ಅಧಿಕೃತ ನಿವಾಸದಲ್ಲಿ , ಭಾನುವಾರ ನಡೆಯಿತು.

ಜಾಹೀರಾತು

ಈ ಕಾರ್ಯಕ್ರಮದಲ್ಲಿ ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಗೈಡ್ ವಿದ್ಯಾರ್ಥಿನಿಯರಾದ ಸೃಜನ, ಅಕ್ಷತಾ ಪೈ, ಮಂಜುಷಾ, ಹಾಗೂ ಸ್ಕೌಟ್ ವಿದ್ಯಾರ್ಥಿ ಗಳಾದ ಸಾತ್ವಿಕ್, ಯಶ್ ಕಾವ, ಆಕರ್ಷ, ರುಚಿರ್,  ಆಲೇನ್ ರಿಯನ್, ಅನಿಶ್ ಕೃಷ್ಣ ಇವರುಗಳು ಭಾಗವಹಿಸಿದರು. ಗೈಡ್ ಶಿಕ್ಷಕಿಯವರಾದ ಜಯಶ್ರೀ ಈ ಸಮಾರಂಭದಲ್ಲಿ ವಿದ್ಯಾರ್ಥಿಗಳ ಜತೆಗೆ ಭಾಗವಹಿಸಿದರು. ಜಿಲ್ಲಾಧಿಕಾರಿಯವರಿಂದ ಸೃಜನ ಮತ್ತು ಸಾತ್ವಿಕ್ ಪ್ರಶಸ್ತಿಪತ್ರ ಪಡೆದುಕೊಂಡರು. ಶಾಲೆಯ ಆಡಳಿತಾಧ್ಯಕ್ಷರಾದ ಎಲ್. ಎನ್. ಕೂಡೂರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ